Breaking News

ಸೋಮವಾರ ಶಾಲೆ ಆರಂಭವಾದರೆ ಕೆಸರು ತುಂಬಿದ ಈ ರಸ್ತೆಯಲ್ಲಿ ನಾವು ಹೋಗುವುದಾದರೂ ಹೇಗೆ ಎಂಬ ಚಿಂತೆ ಈ ಪುಟಾಣಿಗಳಿಗೆ.

Spread the love

ಬೆಳ್ಳಾರೆ: ಸೋಮವಾರ ಶಾಲೆ ಆರಂಭವಾದರೆ ಕೆಸರು ತುಂಬಿದ ಈ ರಸ್ತೆಯಲ್ಲಿ ನಾವು ಹೋಗುವುದಾದರೂ ಹೇಗೆ ಎಂಬ ಚಿಂತೆ ಈ ಪುಟಾಣಿಗಳಿಗೆ.

ಆದರೆ ಅವರಿವರ ಬಳಿ ಹೇಳಿ ಪ್ರಯೋಜನ ಇಲ್ಲ; ನಮ್ಮ ರಸ್ತೆಯನ್ನು ನಾವೇ ಸರಿಪಡಿಸಿಕೊಳ್ಳುತ್ತೇವೆ ಎಂದುಕೊಂಡು ಬೆಳ್ಳಾರೆ ಗ್ರಾಮದ ಮೂಡಾಯಿ ತೋಟ ಬೆಳ್ಳಾರೆ ರಸ್ತೆಯ ಮಂಡೇಪು ಎಂಬಲ್ಲಿ ಮಣ್ಣಿನ ರಸ್ತೆಯು ಕೆಸರುಮಯವಾಗಿದ್ದು, ನಡೆದುಕೊಂಡು ಹೋಗಲೂ ಅಸಾಧ್ಯವಾಗಿದೆ.

ಇದೀಗ ಪ್ರಾಥಮಿಕ ಶಾಲೆ ಆರಂಭಕ್ಕೆ ಸರಕಾರ ದಿನ ನಿಗದಿಪಡಿಸಿದ್ದು ಈ ರಸ್ತೆಯಲ್ಲಿ ನಡೆದುಕೊಂಡು ತಮ್ಮ ಶಾಲಾ ಸಮವಸ್ತ್ರ ಕೆಸರಾಗುವುದು ಗ್ಯಾರಂಟಿ ಎಂದು ತಿಳಿದ 2ನೇ ತರಗತಿಯ ವಲ್ಲೀಶ ರಾಮ ಮತ್ತು ತನ್ವಿ ಹಾರೆ ಹಿಡಿದು ಕೆಸರನ್ನು ಬದಿಗೆ ಸರಿಸಿದರು. ಈ ದೃಶ್ಯ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್‌ ಆಗಿದೆ.

 


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ