Breaking News

ಕುಮಾರಸ್ವಾಮಿ ಬಸವ ಕಲ್ಯಾಣದಲ್ಲಿ ಕುಮಾರಸ್ವಾಮಿ ಸೂಟ್ ಕೇಸ್ ತೆಗೆದುಕೊಂಡು ಅಭ್ಯರ್ಥಿ ಹಾಕಿದ್ದಾರೆ.

Spread the love

ಕುಮಾರಸ್ವಾಮಿ ಸಾಕಿದ್ದೇ ನಾನು ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

ಬಸವ ಕಲ್ಯಾಣದಲ್ಲಿ ಕುಮಾರಸ್ವಾಮಿ ಸೂಟ್ ಕೇಸ್ ತೆಗೆದುಕೊಂಡು ಅಭ್ಯರ್ಥಿ ಹಾಕಿದ್ದಾರೆ. ರೂ. 10 ಕೋಟಿ ಪಡೆದು ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ದಾರೆ. ಅದು ಸೂಟ್ ಕೇಸ್ ರಾಜಕಾರಣ ಮಾಡುತ್ತಿದೆ. 2005 ರಲ್ಲಿ ನನ್ನ ಸೋಲಿಸಲು ಕೈ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿರಲಿಲ್ಲ. ದೇವೇಗೌಡರ ಋಣ ನನ್ನ ಮೇಲಿದೆ. ದೇವೇಗೌಡರರಿಂದ ಶಾಸಕನಾಗಿದ್ದೇನೆಯೇ ಹೊರತು ಕುಮಾರಸ್ವಾಮಿಯಿಂದಲ್ಲ ಎಂದು ಹೇಳಿದ್ದಾರೆ.

ನಾನು ಬಸ್ ಮಾಲೀಕನಾಗಿದ್ದೆ. ನನ್ನ ತಾತನ ಜಮಾನದಿಂದ ಬಸ್ ಇದೆ. ನಿಮ್ಮ ಹಾಗೆ ನಾನು ಬಿಬಿಎಂಪಿಯಲ್ಲಿ ಸ್ಕೂಟರ್ ಇಟ್ಟುಕೊಂಡು ಕಸ ಗಿಡಿಸುತ್ತಿರಲಿಲ್ಲ. ಕುಮಾರಸ್ವಾಮಿ ಬಗ್ಗೆ ಬಿಚ್ಚಿ ಹೇಳಬೇಕಾಗುತ್ತದೆ. ನಾನು ಸುಮ್ಮನೇ ಕೂರುವ ಮಗ ಅಲ್ಲ. ನನ್ನ ತಂಟೆಗೆ ಬಂದರೆ ಎಲ್ಲ ಬಿಚ್ಚಿಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಹುಲಿ ಇದ್ದಂಗೆ. ಅವರೇ ನಮ್ಮ ನಾಯಕರು. 2004ರಲ್ಲಿ ಕುಮಾರಸ್ವಾಮಿ ಆದಾಯ ನಿಲ್ ಇತ್ತು. 2008 ರಲ್ಲಿ ರೂ. 360 ಕೋಟಿ ಕುಮಾರಸ್ವಾಮಿ ತೋರಿಸಿದ್ದಾರೆ. ಕುಮಾರಸ್ವಾಮಿ ಯಾರು ಬೆಳೆಯುವುದನ್ನು ಸಹಿಸುವುದಿಲ್ಲ. ಅಲ್ಪಸಂಖ್ಯಾತರು ಮಾತ್ರವಲ್ಲ. ಒಕ್ಕಲಿಗರು ಕೂಡ ಬೆಳೆಯುವುದನ್ನು ಸಹಿಸಲ್ಲ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ