ಬೆಂಗಳೂರು: ಹಾನಗಲ್ ವಿಧಾನಸಭೆ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋಮವಾರದಿಂದ ಮೂರು ದಿನ ಹಾನಗಲ್‌ನಲ್ಲಿಯೇ ಮೊಕ್ಕಾಂ ಹೂಡಲಿದ್ದಾರೆ.
ರವಿವಾರ ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಬೂಸನೂರು ಪರ ಪ್ರಚಾರ ನಡೆಸಿ, ಹುಬ್ಬಳ್ಳಿಗೆ ಆಗಮಿಸಿದ್ದ ಅವರು ಸೋಮವಾರದಿಂದ ಹಾನಗಲ್‌ನಲ್ಲಿ ನಿರಂತರ ಪ್ರಚಾರ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆಂದು ತಿಳಿದು ಬಂದಿದೆ.
ಬಿಜೆಪಿಯ ಗೆಲುವಿನ ಅಂತರವನ್ನು ಹೆಚ್ಚಿಸುವ ಮೂಲಕ ತಮ್ಮ ನಾಯಕತ್ವವನ್ನು ಸಾಬೀತುಪಡಿಸಲು ಸಿಎಂ ಈ ಕಾರ್ಯತಂತ್ರ ರೂಪಿಸಿದ್ದಾರೆ ಎನ್ನಲಾಗುತ್ತಿದೆ.
ಬಿಎಸ್‌ವೈ ಜತೆ ರೋಡ್ ಶೋ
ಹಾನಗಲ್‌ನಲ್ಲಿ ಎರಡು ದಿನ ಯಡಿಯೂರಪ್ಪ ಜತೆಗೆ ಜಂಟಿ ಪ್ರಚಾರ ನಡೆಸಿದ್ದ ಬೊಮ್ಮಾಯಿ, ಚುನಾವಣ ಪ್ರಚಾರದ ಕೊನೆಯ ದಿನ ಮತ್ತೆ ಯಡಿಯೂರಪ್ಪ ಅವರೊಂದಿಗೆ ಜಂಟಿ ಪ್ರಚಾರ ನಡೆಸಲು ನಿರ್ಧರಿಸಿದ್ದಾರೆಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.
ಕೊನೆಯ ಮೂರು ದಿನ ಸಂಪುಟದ ಬಹುತೇಕ ಸಚಿವರೂ ಹಾನಗಲ್‌ನಲ್ಲೇ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿ ದ್ದಾರೆ ಎನ್ನಲಾಗಿದ್ದು, ಸೋಮವಾರದಿಂದ ಹಾಲಿ ಹಾಗೂ ಮಾಜಿ ಸಿಎಂಗಳ ಜೊತೆಗೆ ಸಚಿವ ಸಂಪುಟದ ಬಹುತೇಕ ಸಚಿವರೂ ಹಾನಗಲ್‌ನಲ್ಲಿಯೇ ಮೊಕ್ಕಾಂ ಹೂಡುವ ಸಾಧ್ಯತೆ ಇದೆ.
Laxmi News 24×7