Breaking News

ಸಿದ್ದರಾಮಯ್ಯ ಮಾತುಗಳಿಗೆ ಕವಡೆ ಕಾಸಿನ ಬೆಲೆ ಇಲ್ಲ : ಬಿ.ಎಸ್. ಯಡಿಯೂರಪ್ಪ

Spread the love

ದಾವಣಗೆರೆ : ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿರುವ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಮಾತುಗಳಿಗೆ ಕವಡೆ ಕಾಸಿನ ಬೆಲೆ ಇಲ್ಲ ಎಂದು ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದರು.

ನಗರದ ಜಿಎಂಐಟಿ ಅತಿಥಿ ಗೃಹಕ್ಕೆ ಅನಿರೀಕ್ಷಿತವಾಗಿ ಭಾನುವಾರ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿಂಧಗಿ, ಹಾನಗಲ್ ಉಪ ಚುನಾವಣೆಯಲ್ಲಿ ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ. ಫಲಿತಾಂಶ ಬಂದ ಮೇಲೆ ನಿಮಗೇ ಗೊತ್ತಾಗುತ್ತದೆ’ ಎಂದರು.

ಎರಡೂ ಕ್ಷೇತ್ರಗಳಲ್ಲೂ ನಾವು ದೊಡ್ಡ ಅಂತರದಿಂದಲೇ ಗೆಲ್ಲುತ್ತೇವೆ. ಹಾನಗಲ್, ಸಿಂಧಗಿ ಕ್ಷೇತ್ರಗಳಲ್ಲಿ ಜನರು ಸಂಪೂರ್ಣವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತದ ಬಿಜೆಪಿ ಪಕ್ಷಕ್ಕೆ ಬೆಂಬಲ ಕೊಡಬೇಕು ಎಂದು ತೀರ್ಮಾನ ಮಾಡಿದ್ದಾರೆ ಎಂದು ಹೇಳಿದರು


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ