ತೀವ್ರ ಕಾಲು ನೋವಿನಿಂದ ಬಳಲುತ್ತಿದ್ದ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಚಿಕಿತ್ಸೆಗಾಗಿ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿ ಖುದ್ದು ರೇಣುಕಾಚಾರ್ಯ ಅವರೇ ಸ್ಪಷ್ಟಪಡಿಸಿದ್ದಾರೆ.
ಆತ್ಮೀಯ ಬಂಧುಗಳೇ, ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಂಭವಿಸಿದ್ದ ಅಪಘಾತದಿಂದಾಗಿ ಕಳೆದ ಕೆಲ ತಿಂಗಳಿಂದ ಕಾಲು ನೋವು ಕಾಣಿಸಿಕೊಂಡಿದೆ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಮುಂಬೈ ಆಸ್ಪತೆಯಲ್ಲಿ ಆಪರೇಷನ್ಗೆ ಒಳಗಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಆತ್ಮೀಯ ಬಂಧುಗಳೇ…
ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಸಂಭವಿಸಿದ್ದ ಅಪಘಾತದಿಂದಾಗಿ ಕಳೆದ ಕೆಲ ತಿಂಗಳಿಂದ ಕಾಲು ನೋವು ಕಾಣಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಮುಂಬೈ ಆಸ್ಪತೆಯಲ್ಲಿ ಆಪರೇಷನ್ ಗೆ ಒಳಗಾಗಿದ್ದೇನೆ.
ನಿಮ್ಮೆಲ್ಲರ ಹಾರೈಕೆ ಹಾಗೂ ಆಶೀರ್ವಾದದಿಂದ ಗುಣಮುಖನಾಗುತ್ತಿದ್ದು ವೈದ್ಯರ ಸಲಹೆ ಮೇರೆಗೆ ಮುಂದಿನ 15 ದಿನಗಳು pic.twitter.com/rY80Mc2UY8
— M P Renukacharya (@MPRBJP)
ಇನ್ನು, ನಿಮ್ಮೆಲ್ಲರ ಹಾರೈಕೆ ಹಾಗೂ ಆಶೀರ್ವಾದದಿಂದ ಗುಣಮುಖನಾಗುತ್ತಿದ್ದೇನೆ. ವೈದ್ಯರ ಸಲಹೆ ಮೇರೆಗೆ ಮುಂದಿನ 15 ದಿನಗಳು ಬೆಂಗಳೂರಿನ ಆಯುರ್ವೇದಿಕ್ ಆಸ್ಪತ್ರೆಗೆ ದಾಖಲಾಗುತ್ತಿದ್ದು, ನಿಮ್ಮ ಅಹವಾಲುಗಳಿಗೆ ದೂರವಾಣಿ ಮೂಲಕ ನನ್ನ ಆಪ್ತ ಸಹಾಯಕರು ಸ್ಪಂದಿಸಲಿದ್ದಾರೆ. ಎಲ್ಲರೂ ಸಹಕರಿಸಬೇಕಾಗಿ ವಿನಯಪೂರ್ವಕವಾಗಿ ವಿನಂತಿಸುತ್ತೇನೆ. ಇಂತಿ ನಿಮ್ಮ ಮನೆ ಮಗ, ನಿಮ್ಮ ಸೇವಕ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.