Breaking News

ಬೆಳಗಾವಿ ಜಿಲ್ಲೆಯ ವಿಧವೆಯರಿಗೆ 8 ಸಾವಿರ ಮನೆ ಮಂಜೂರು- ಕವಟಗಿಮಠ

Spread the love

ಚಿಕ್ಕೋಡಿ: ಸಮಾಜದಲ್ಲಿ ತುಳಿತಕ್ಕೆ ಒಳಗಾದ ವಿಧವೆಯರಿಗೆ ಬೆಳಗಾವಿ ಜಿಲ್ಲೆಗೆ 8 ಸಾವಿರ ಮನೆ ಮಂಜೂರು ಮಾಡಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ತಾಲೂಕಿನ 9 ಗ್ರಾಮ ಪಂಚಾಯತಿಯ 120 ಮನೆಗಳು ಮಂಜೂರಾಗಿವೆ ಎಂದು ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು.

ಇಲ್ಲಿನ ಸಿಎಲ್ ಇ ಸಂಸ್ಥೆಯ ಸಭಾ ಭವನದಲ್ಲಿ ರಾಜೀವ ಗಾಂಧಿ ವಸತಿ ನಿಗಮ ಬೆಂಗಳೂರು ಇವರ ವತಿಯಿಂದ ದೇವರಾಜ ಅರಸು ವಿಶೇಷ ವಸತಿ ಯೋಜನೆಯಡಿ ಚಿಕ್ಕೋಡಿ ಸದಲಗಾ ಕ್ಷೇತ್ರದ ವಿವಿಧ ಗ್ರಾಮ ಪಂಚಾಯತಿಗಳ ವಸತಿ ರಹಿತ ವಿಧವೆಯರಿಗೆ ಮನೆಗಳ ಹಕ್ಕು ಪತ್ರ ವಿತರಣೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಜ್ಯದಲ್ಲಿ 10 ಸಾವಿರ ಮನೆ ನೀಡುವ ಗುರಿ ಮಾಡಲಾಗಿತ್ತು. ಅದನ್ನು ಸದುಪಯೋಗ ಪಡಿಸಿಕೊಳ್ಳಲಾಗಿದೆ.

ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಬೆಳಗಾವಿ ಜಿಲ್ಲೆಗೆ 8 ಸಾವಿರ ಮನೆಗಳು ಮಂಜೂರು ಮಾಡಲಾಗಿದೆ ಎಂದರು.

ಸಮಾಜದ ಋಣವನ್ನು ತೀರಿಸಲು ಬಡ ಜನರ ಸೇವೆಗೆ ಮಾಡಲಾಗುತ್ತದೆ. ಮುಂಬರುವ ದಿನಗಳಲ್ಲಿ ಸರಕಾರದ ಹಲವು ಯೋಜನೆ ತಲುಪಿಸಲಾಗುತ್ತದೆ ಎಂದರು.

ಚಿಂಚಣಿ ಅಲ್ಲಮಪ್ರಭು ಸ್ವಾಮೀಜಿ.ಸಂಪಾದನ್ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ವೇದಿಕೆ ಮೇಲೆ ತಹಶೀಲ್ದಾರ ಎನ್.ಬಿ.ಗೆಜ್ಜಿ. ಭರತೇಶ ಬನವಣೆ. ತಾ.ಪಂ ಕಾರ್ಯನಿರ್ವಹಕ ವೀರಣ್ಣ ವೀರನ್ನವರ. ಶೈಲಜಾ ಪಾಟೀಲ. ಪುರಸಭೆ ಉಪಾಧ್ಯಕ್ಷ ಸಂಜಯ ಕವಟಗಿಮಠ ಮುಂತಾದವರು ಇದ್ದರು. ಸತೀಶ ಅಪ್ಪಾಜಿಗೋಳ ಸ್ವಾಗತಿಸಿದರು.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ