ಹುಬ್ಬಳ್ಳಿ: ಬಿಟ್ ಕಾಯಿನ್ ಮತ್ತು ಡ್ರಗ್ಸ್ ಪ್ರಕರಣದ ವಿಚಾರವಾಗಿ ಈಗಾಗಲೇ ರಾಜ್ಯ ತನಿಖಾ ಸಂಸ್ಥೆ ತನಿಖೆ ನಡೆಸುತ್ತೀವೆ. ಅದರಲ್ಲಿ ರಾಜಕಾರಣಿಗಳು ಮತ್ತು ಪ್ರಭಾವಿಗಳು ಭಾಗಿಯಾಗಿದ್ದರೆ ಹೆಸರು ಹೇಳಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಸಿಎಂ ಬಸವರಾಜ ಬೊಮ್ಮಾಯಿ ಸವಾಲು ಹಾಕಿದರು. ನಗರದಲ್ಲಿ ಗುರುವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮತ್ತು ಸಿಬಿಐಗೆ ನಾವೇ ಸ್ವತಃ ವಹಿಸಿದ್ದೇವೆ. ಈ ಪ್ರಕರಣದಲ್ಲಿ ಭಾಗಿಯಾದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲಾ ಎಂದು ಸ್ಪಷ್ಟಪಡಿಸಿದರು.
ರಾಜ್ಯದ ಇತಿಹಾಸದಲ್ಲಿ ಮೊದಲು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲಕುಮಾರ ಅವರ ನೇತೃತ್ವದಲ್ಲಿ ಮಾತಾಡ್ ಮಾತಾಡ್ ಕನ್ನಡ ಅಭಿಯಾನ ಆಯೋಜಿಸಿದ್ದು, ಕನ್ನಡ ಜಾಗೃತಿ ಮತ್ತು ಅಭಿಮಾನ ಬರುವಂತಹದ್ದಾಗಿದ್ದು, ರಾಜ್ಯದ ಇತಿಹಾಸದಲ್ಲಿ ಮೊದಲಾಗಿದೆ. ಒಂದುವಾರ ಈ ಅಭಿಯಾನದಲ್ಲಿ ಪ್ರತಿಯೊಬ್ಬ ಕನ್ನಡಿಗರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.
ಕನ್ನಡ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಳು ಮುಂದಿನ ಪ್ರತಿತಿಂಗಳಲ್ಲಿ ನಡೆಸಲು ಸಚಿವ ಸುನಿಲಕುಮಾರ ಅವರಿಗೆ ಸೂಚಿಸುತ್ತೇನೆ. ಮನ ಮನದಲ್ಲಿ ಕನ್ನಡವಾಗಿ 21 ನೇ ಶತಮಾನದಲ್ಲಿ ಕನ್ನಡ ನಾಡನ್ನು ಮತ್ತು ಕನ್ನಡ ಭಾಷೆಯನ್ನು ಅಭಿವೃದ್ಧಿ ಪಡಿಸುವ ಕೆಲಸವಾಗಬೇಕು ಎಂದು ಹೇಳಿದರು.
ಬೆಳಗಾವಿಯಲ್ಲಿ ಕನ್ನಡ ರಾಜೋತ್ಸವ: ಬೆಳಗಾವಿಯಲ್ಲಿ ಕನ್ನಡ ರಾಜೋತ್ಸವವನ್ನು ಮಾಡುವ ಕುರಿತು ಪೂರ್ವಭಾವಿ ಸಭೆ ಕರೆಯಲಾಗಿದ್ದು, ಅಲ್ಲಿ ತೀರ್ಮಾನಿಸಲಾಗುವುದು ಎಂದರು