Breaking News

ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಕೊಚ್ಚಿ ಹೋದ ಯುವಕ, 24 ಗಂಟೆ ಕಳೆದರೂ ಪತ್ತೆಯಾಗದ ಶವ

Spread the love

ದಾವಣಗೆರೆ: ಜಿಲ್ಲೆಯಲ್ಲಾದ ಭಾರಿ ಮಳೆಗೆ ಚಿರಡೋಣಿ ಹಾಗೂ ದೊಡ್ಡಘಟ್ಟ ಗ್ರಾಮಗಳ ನಡುವಿನ ಹಳ್ಳ ತುಂಬಿ ಹರಿಯುತ್ತಿದೆ. ಈ ಹಳ್ಳದಾಟಲು ಹೋಗಿ ಯುವಕ ಕೊಚ್ಚಿ ಹೋದ ಘಟನೆ ದಾವಣಗೆರೆಯಲ್ಲಿ ಸಂಭವಿಸಿದೆ. ಶಿವರಾಜ್ (23) ನೀರು ಪಾಲದ ಯುವಕ. ಘಟನೆ ಸಂಭವಿಸಿ 24 ಗಂಟೆ ಕಳೆದರೂ ಯುವಕನ ಶವ ಪತ್ತೆಯಾಗಿಲ್ಲ.

ಭಾರಿ ಮಳೆಗೆ ತುಂಬಿ ಹರಿಯುತ್ತಿರುವ ಹಳ್ಳವನ್ನು ದಾಟಲು ಮುಂದಾಗಿದ್ದ ಯುವಕ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾನೆ. ಕಳೆದ 24 ಗಂಟೆಗಳಿಂದ ಹಳ್ಳಕ್ಕೆ ಬಲೆ ಹಾಕಿ ಶವಕ್ಕೆ ಸಂಬಂಧಿಕರು ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ಆಗ್ನಿ ಶಾಮಕ ದಳ ಹಾಗೂ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದು ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾಠ ಕೇಳಲು ಹೋದ ಮಕ್ಕಳಿಗೆ ಜೀವಭಯ
ವಾರದ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಭಾರಿ ಮಳೆಯಾಗಿದೆ. ಜಿಲ್ಲೆಯ ಇತಿಹಾಸದಲ್ಲೇ ಈ ಬಾರಿ ಕಂಡು ಕೇಳರಿಯದ ಮಳೆ ಸುರಿದಿದೆ. ಇದ್ರಿಂದ ಜಿಲ್ಲೆಯ ಬಹುತೇಕ ಶಾಲಾ ಕಾಲೇಜುಗಳ ಕಟ್ಟಡಗಳಿಗೆ ಹಾನಿಯಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಮಾಹಿತಿ ಪ್ರಕಾರ, ಜಿಲ್ಲೆಯಾದ್ಯಂತ 300ಕ್ಕೂ ಹೆಚ್ಚು ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಕಟ್ಟಡಗಳಿದ್ದು, ಈ ಪೈಕಿ 562 ಕೊಠಡಿಗಳು ಮಳೆಯಿಂದ ಹಾನಿಯಾಗಿ ಬೀಳುವ ಹಂತದಲ್ಲಿವೆ. ಇಂಥಾ ಕಟ್ಟಡಗಳಲ್ಲೇ ಮಕ್ಕಳು ಪಾಠ ಕೇಳುವಂತಾಗಿದೆ.

ಇನ್ನು, ಶಿಕ್ಷಣ ಇಲಾಖೆ ಮಾಹಿತಿ ಆಧಾರದ ಮೇಲೆ ಟಿವಿ9 ಟೀಂ, ಕುಪ್ಪಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡ್ತು. ಅಲ್ಲಿನ ವಾಸ್ತವ ಚಿತ್ರಣ ವೀಕ್ಷಿಸಿದಾಗ, ಕೆಲವು ಕೊಠಡಿಗಳಿಂದ ನೀರು ಜಿನುಗುತ್ತಿತ್ತು. ಮತ್ತೆ ಕೆಲವು ಗೋಡೆಗಳು ಬಿರುಕು ಬಿಟ್ಟಿವೆ. ಇನ್ನೂ ಕೆಲವು ಶಾಲೆಗಳ ಮೇಲ್ಚಾವಣಿ ಕುಸಿದು ಬೀಳ್ತಿದೆ. ಹೀಗಾಗಿ, 562 ಶಾಲಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಪಾಠ ನಿಲ್ಲಿಸಿ ಪರ್ಯಾಯ ಕೊಠಡಿಗಳ ವ್ಯವಸ್ಥೆ ಮಾಡ್ಲಾಗಿದೆ. ಸದ್ಯಕ್ಕೆ ವಿದ್ಯಾರ್ಥಿಗಳು ಕಡಿಮೆ ಸಂಖ್ಯೆಯಲ್ಲಿ ಶಾಲೆಗೆ ಬರ್ತಿದ್ದಾರೆ. ಸ್ಟೂಡೆಂಟ್ಸ್ ಸಂಖ್ಯೆಯಲ್ಲಿ ಹೆಚ್ಚಳವಾದ್ರೆ, ಪಾಠಕ್ಕೆ ತೊಂದ್ರೆ ಆಗಲಿದೆ. ಹೀಗಾಗಿ, ಶಾಲೆಗಳ ದುರಸ್ಥಿತಿಗೆ 7 ಕೋಟಿ ಅನುದಾನ ನೀಡುವಂತೆ ಶಿಕ್ಷಣ ಇಲಾಖೆ ಸರ್ಕಾರಕ್ಕೆ ಮನವಿ ಮಾಡಿದೆ.


Spread the love

About Laxminews 24x7

Check Also

ಹಾರ್ಟ್​ ಅಟ್ಯಾಕ್ ಭಯದಿಂದಾಗಿ ಮೈಸೂರಿನ ಜಯದೇವ ಆಸ್ಪತ್ರೆಗೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ.

Spread the loveಹಾರ್ಟ್ ಅಟ್ಯಾಕ್ ಭಯ : ತಪಾಸಣೆಗಾಗಿ ಮೈಸೂರಿನ ಜಯದೇವ ಆಸ್ಪತ್ರೆಗೆ ಯುವಕರ ಲಗ್ಗೆ ಮೈಸೂರು : ಹಾಸನ ಜಿಲ್ಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ