ಬೆಂಗಳೂರು: ‘ನಟ ಪುನೀತ್ ರಾಜ್‌ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಗಣ್ಯರಿಗೆ ಪ್ರತ್ಯೇಕ ದ್ವಾರದ ಮೂಲಕ ಪ್ರವೇಶ ನೀಡಲಾಗುತ್ತದೆ. ತಮ್ಮ ನೆಚ್ಚಿನ ನಟನ ಅಂತಿಮ ದರ್ಶನ ಪಡೆಯಲು ಅಭಿಮಾನಿಗಳಿಗೂ ಅವಕಾಶ ನೀಡಲಾಗುತ್ತದೆ’ ಎಂದು ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದರು.
‘ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡುವ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಎಚ್ಚರಿಸಿದರು.
‘ಮುಂಜಾಗ್ರತಾ ದೃಷ್ಟಿಯಿಂದ ಶುಕ್ರವಾರ ಮಧ್ಯಾಹ್ನದಿಂದ ಭಾನುವಾರ ಮಧ್ಯರಾತ್ರಿಯವರೆಗೆ ಮದ್ಯದಂಗಡಿಗಳನ್ನು ಬಂದ್ ಮಾಡಿಸಲಾಗುತ್ತಿದೆ. ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗುತ್ತಿದ್ದು, ಇದಕ್ಕಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನೂ ನಿಯೋಜಿಸಲಾಗಿದೆ’ ಎಂದು ತಿಳಿಸಿದರು.
Laxmi News 24×7