Breaking News

ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಮತದಾನ

Spread the love

ಬೆಂಗಳೂರು : ರಾಜ್ಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಇಂದು ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸಿಂದಗಿ ಕ್ಷೇತ್ರದಲ್ಲಿ ಜೆಡಿಎಸ್ ಮಾಜಿ ಸಚಿವ ಎಂ.ಸಿ. ಮನಗೂಳಿ ಅವರ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದ್ದು, ಸಿಂದಗಿಯಲ್ಲಿ ಕಾಂಗ್ರೆಸ್ ನಿಂದ ಮನಗೂಳಿ ಪುತ್ರ ಅಶೋಕ್ ಮನಗೂಳಿ ಸ್ಪರ್ಧಿಸಿದ್ದಾರೆ.

ಬಿಜೆಪಿಯಿಂದ ರಮೇಶ್ ಭೂಸನೂರು, ಜೆಡಿಎಸ್ ನಿಂದ ನಾಜಿಯಾ ಅಂಗಡಿ ಸೇರಿದಂತೆ 6 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಸಿಂದಗಿ ಕ್ಷೇತ್ರದಲ್ಲಿ ಒಟ್ಟು 2,34,584 ಮತದಾರರು ಮತ ಚಲಾಯಿಸಲಿದ್ದಾರೆ. ಈ ಪೈಕಿ 1,20,844 ಪುರುಷರು, 1,13,561 ಮಹಿಳೆಯರು ಹಾಗೂ 32 ಇತರೆ ಮತದಾರರು ಮತ ಚಲಾಯಿಸಲಿದ್ದಾರೆ. ಕ್ಷೇತ್ರದ ಎರಡು ಸಖಿ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಒಟ್ಟು 297 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಹಾನಗಲ್ ಕ್ಷೇತ್ರದಲ್ಲಿ ಸಿ.ಎಂ. ಉದಾಸಿ ಅವರ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಬಿಜೆಪಿಯಿಂದ ಶಿವರಾಜ್ ಸಜ್ಜನರ, ಕಾಂಗ್ರೆಸ್ ನಿಂದ ಶ್ರೀನಿವಾಸ್ ಮಾನೆ,ಜೆಡಿಎಸ್ ನಿಂದ ನಿಯಾಜ್ ಶೇಕ್ ಸೇರಿದಂತೆ 13 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕ್ಷೇತ್ರದಲ್ಲಿ 1,05,525 ಪುರುಷ ಹಾಗೂ 98,953 ಮಹಿಳೆ ಹಾಗೂ ಮೂವರು ಇತರೆ ಮತದಾರರು ಸೇರಿದಂತೆ ಒಟ್ಟು 2,04,481 ಮತದಾರರು ಇದ್ದಾರೆ. ಕ್ಷೇತ್ರದ ಎರಡು ಕಡೆ ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಒಟ್ಟು 263 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಎರಡು ಕ್ಷೇತ್ರಗಳ ಫಲಿತಾಂಶ ನವೆಂಬರ್ 2 ರಂದು ಪ್ರಕಟವಾಗಲಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ