Breaking News

ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ : `KSRTC’ ಯಿಂದ 1 ಸಾವಿರ ಹೆಚ್ಚುವರಿ ಬಸ್

Spread the love

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು, ನವೆಂಬರ್ 7 ರವರೆಗೆ 1 ಸಾವಿರ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರಿನಿಂದ ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ಹಾಗೂ ಅಂತರರಾಜ್ಯದ ತಿರುಪತಿ, ವಿಜಯವಾಡ, ಹೈದರಾಬಾದ್, ತಿರುವನಂತಪುರ, ಕೋಟಯಂ, ಚೆನ್ನೈ, ಕೊಯಮತ್ತೂರು, ಪುಣೆ, ಪಣಜಿಗೆ ಹಾಗೂ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಹೆಚ್ಚುವರಿ ಬಸ್‌ಗಳ ಸೇವೆ ಇರಲಿವೆ ಎಂದು ಕೆಎಸ್ ಆರ್ ಟಿಸಿ ತಿಳಿಸಿದೆ.

ಪ್ರಯಾಣಿಕರು ನಿಗಮದ ವೆಬ್‍ಸೈಟ್ www.ksrtc.karnataka.gov.in ಹಾಗೂ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡ ಟಿಕೆಟ್ ಬುಕ್ ಮಾಡುವ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ