ನವದೆಹಲಿ : ರಾಜ್ಯಾದ್ಯಂತ ಇಂದು 66 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕನ್ನಡ ರಾಜ್ಯೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ನಾಡಿನ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
ಟ್ವೀಟರ್ ನಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿರುವ ಪ್ರಧಾನಿ ಮೋದಿ, ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು.
ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ.