Breaking News

ವಿಜಯಪುರದಲ್ಲಿ, ಜಿಲ್ಲಾಡಳಿತದ ವತಿಯಿಂದ ೬೬ನೇ ಕನ್ನಡ ರಾಜ್ಯೋತ್ಸ

Spread the love

ಬದುಕಿನುದ್ದಕ್ಕೂ ಕನ್ನಡ ಪ್ರೀತಿ ಮೆರೆಯೋಣ, ಕನ್ನಡಾಂಬೆಯ ಸೇವೆ ಮಾಡೋಣ.”

ವಿಜಯಪುರದಲ್ಲಿ, ಜಿಲ್ಲಾಡಳಿತದ ವತಿಯಿಂದ ೬೬ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯ ಉಸ್ತುವಾರಿ ಹಾಗೂ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಭಾಗವಹಿಸಿ, ಭುವನೇಶ್ವರಿ ತಾಯಿಗೆ ಪುಷ್ಪನಮನ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿದ ಬಳಿಕ ಪೊಲೀಸ್ ಸಿಬ್ಬಂದಿ, ಗೃಹ ರಕ್ಷಕ ಸಿಬ್ಬಂದಿ, ಅಗ್ನಿಶಾಮಕ ದಳದಿಂದ ಗೌರವ ವಂದನೆ ಸ್ವೀಕರಿಸಿದರು.

ಕನ್ನಡ ಬರೀ ಭಾಷೆ ಅಲ್ಲ. ಅದು ನಮ್ಮ ಬದುಕು, ಸಂಸ್ಕೃತಿ, ಪರಂಪರೆ. ವಿವಿಧ ಸಂಸ್ಕೃತಿಗಳ ತವರೂರು ನಮ್ಮ ಕರುನಾಡು. ನಮ್ಮ ಕರುನಾಡಿನ ಏಳಿಗೆಗಾಗಿ ಹಲವಾರು ಮಹನೀಯರು ಶ್ರಮಿಸಿದ್ದಾರೆ. ಅವರ ಕೊಡುಗೆಗಳನ್ನು ಸ್ಮರಿಸುತ್ತಾ, ಈ ಪವಿತ್ರ ಭಾಷೆಯನ್ನು ಉಳಿಸಿ, ಬೆಳೆಸೋದು ನಮ್ಮೆಲ್ಲರ ಜವಾಬ್ದಾರಿ. ಎಲ್ಲರ ನುಡಿಯಾಗಲಿ ಕನ್ನಡ, ಎಲ್ಲರ ನಡೆಯಾಗಲಿ ಕನ್ನಡ.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಬಸನಗೌಡ ಪಾಟೀಲ ಯತ್ನಾಳ ಜಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಅರುಣ ಶಹಾಪುರ ಜಿ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶ್ರೀ ಅಶೋಕ ಅಲ್ಲಾಪುರ ಜಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಶ್ರೀಹರಿ ಗೋಳಸಂಗಿ, ಜಿಲ್ಲಾಧಿಕಾರಿ ಶ್ರೀ ಪಿ. ಸುನೀಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹೆಚ್.ಡಿ ಆನಂದಕುಮಾರ, ಜಿ.ಪಂ. ಸಿಇಒ ಶ್ರೀ ಗೋವಿಂದರೆಡ್ಡಿ, ಗಣ್ಯರು, ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಗಣೇಶ ಮೂರ್ತಿಗಳ ವಿಸರ್ಜನೆಗೆ ಸಚಿವ ಸತೀಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಸೂಕ್ತ ವ್ಯವಸ್ಥೆ ಮಲಗೌಡಾ ಪಾಟೀಲ ಸೂಚನೆ …

Spread the love ಗಣೇಶ ಮೂರ್ತಿಗಳ ವಿಸರ್ಜನೆಗೆ ಅಳತಗಾ ಸೇತುವೆ ಸಿದ್ಧತೆಗೆ ಅಗತ್ಯ ಕ್ರಮಕ್ಕೆ ಕೆಪಿಸಿಸಿ ಸದಸ್ಯ ಮಲಗೌಡಾ ಪಾಟೀಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ