ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಇಳಿಸಲು ಕೇಂದ್ರ ಕ್ರಮಗಳನ್ನು ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಬೆಲೆ ಇಳಿಕೆಯಾಗಲಿದೆ ಎಂಬ ವಿಶ್ವಾಸವನ್ನು ಶಾಸಕ ಅರವಿಂದ ಬೆಲ್ಲದ ವ್ಯಕ್ತಪಡಿಸಿದರು.
ನಗರದಲ್ಲಿಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಮಾತನಾಡಿದ ಅವರು,ಬೆಲೆ ಏರಿಕೆಯಾಗುತ್ತಿರುವದು ಸರ್ಕಾರದ ಗಮನಕ್ಕೆ ಇದೆ. ಸರ್ಕಾರ ಬೆಲೆ ಇಳಿಕೆ ಮಾಡಲು ಯತ್ನಿಸುತ್ತಿದೆ ಎಂದರು.
ತೆರಿಗೆ ವಸೂಲಿ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ತಗೆದುಕೊಳ್ಳಲಿದೆ. ಎಲ್ಲಾ ರಾಜ್ಯಗಳಿಗಿಂತಲೂ ರಾಜ್ಯ ಸರ್ಕಾರ ಕಡಿಮೆ ತೆರಿಗೆ ಇದೆ. ಉತ್ತರ ಪ್ರದೇಶ ಚುನಾವಣಾ ಮೇಲೆ ಬೆಲೆ ಏರಿಕೆ ಪರಿಣಾಮ ಬೀರುವದಿಲ್ಲ. ಬೆಲೆ ಏರಿಕೆ ನಿರಂತರ ಪ್ರಕ್ರಿಯೆ ಎಂದರು.
ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ ಇನ್ನು 15 ದಿನಗಳಲ್ಲಿ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಸಿಎಂ ಅವರು ಈಗಾಗಲೇ ಹೇಳಿದ್ದಾರೆ ಎಂದರು.
Laxmi News 24×7