ಬೆಂಗಳೂರು: ಸರ್ಕಾರಿ ಶಾಲೆಗಳು ಮತ್ತು ಕನ್ನಡ ಕಲಿಕೆ ಕುರಿತು ಮಕ್ಕಳು ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸಬೇಕಿದೆ ಅದೇ ರೀತಿ ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಒಂದು ಸುಸಜ್ಜಿತವಾದ ಶಾಲಾ ಸಂಕೀರ್ಣ ನಿರ್ಮಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.
ನಾಗೇಶ್ ಹೇಳಿದರು.
ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಸಬಲೀಕರಣ ಅಗತ್ಯವಿದೆ.
ಅದಕ್ಕೆ ಪೂರಕವಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಎಲ್ಲ ಮೂಲಸೌಕರ್ಯ ಇರುವ ಶಾಲಾ ಸಂಕೀರ್ಣ ನಿರ್ಮಿಸಲಾಗುವುದು ಎಂದರು.ರಾಜ್ಯದ 22,718 ಕಿರಿಯ ಪ್ರಾಥಮಿಕ ಶಾಲೆಗಳ ಪೈಕಿ 14,230 ಶಾಲೆಗಳಲ್ಲಿ 40ಕ್ಕಿಂತ ಕಡಿಮೆ ಮಕ್ಕಳ ದಾಖಲಾತಿ ಇದೆ. 22,710 ಹಿರಿಯ ಪ್ರಾಥಮಿಕ ಶಾಲೆಗಳ ಪೈಕಿ 2,421 ಶಾಲೆಗಳಲ್ಲಿ 35ಕ್ಕಿಂತ ಕಡಿಮೆ ಮಕ್ಕಳು ದಾಖಲಾಗಿದ್ದಾರೆ.
Laxmi News 24×7