Breaking News

ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆಗೆ ಆರಂಭವಾಗಿದೆ.

Spread the love

ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆಗೆ ಕ್ಷ ಆರಂಭವಾಗಿದೆ. ಹಾವೇರಿ ಹೊರವಲಯದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆಗೆ ಸಿದ್ಧತೆ ಕೈಗೊಳ್ಳಲಾಗಿದೆ. 

ಈಗಾಗಲೇ ಮತ ಎಣಿಕೆ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಮತಎಣಿಕಾ ಕೇಂದ್ರಕ್ಕೆ ಆಗಮಿಸಿದ್ದು, ಮತಎಣಿಕೆಯ ಸಿದ್ಧತೆಯಲ್ಲಿದ್ದಾರೆ. ಸರಿಯಾಗಿ 7 ಗಂಟೆ 30 ನಿಮೀಷಕ್ಕೆ ಸ್ಟ್ರಾಂಗ್ ರೂಮ್ ತೆರೆಯಲಾಗುತ್ತದೆ. ಅದಾದ ನಂತರ 7 ಗಂಟೆ 45 ನಿಮಿಷಕ್ಕೆ ಅಂಚೆ ಮತ್ತು ಸೇವಾ ಮತ ಎಣಿಕೆ ನಡೆಸಲಾಗುತ್ತೆ. 

8 ಗಂಟೆಯಿಂದ ಮತಯಂತ್ರಗಳ ಮತ ಎಣಿಕೆ ಆರಂಭವಾಗಲಿದೆ. ಸುಮಾರು 19 ಸುತ್ತುಗಳ ಎಣಿಕೆಯ ನಂತರ ಸ್ವಷ್ಟ ಫಲಿತಾಂಶ ಹೊರಬೀಳಲಿದೆ. ಅಂಚೆ ಮತ್ತು ಸೇವಾ ಮತ ಎಣಿಕೆಗೆ ಪ್ರತ್ಯೇಕ ಕೊಠಡಿ ಸಿದ್ಧಪಡಿಸಲಾಗಿದೆ.

ಬಿಜೆಪಿಯಿಂದ ಅಭ್ಯರ್ಥಿಯಾಗಿ ಶಿವರಾಜ್ ಸಜ್ಜನರ್, ಕಾಂಗ್ರೆಸ್​​​ನ ಶ್ರೀನಿವಾಸ ಮಾನೆ, ಜೆಡಿಎಸ್‌ನಿಂದ ನಿಯಾಜ್ ಶೇಖ್ ಸೇರಿದಂತೆ ಒಟ್ಟು13 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸಂಪೂರ್ಣ ಚಿತ್ರಣ ಲಭ್ಯವಾಗಲಿದೆ. 


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ