Breaking News

4.5 ಕೊಟಿ ರೂ ವೆಚ್ಚದಲ್ಲಿ ರಸ್ತೆ ಡಾಂಬರೀಕರಣಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ

Spread the love

ಬೆಳಗಾವಿ: ಗ್ರಾಮೀಣ ಕ್ಷೇತ್ರದ ಪ್ರತಿ ಗ್ರಾಮದಲ್ಲೂ ಒಂದಿಲ್ಲೊಂದು ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಯಾರು ಏನೇ ಅಪಪ್ರಚಾರ ಮಾಡಿದರೂ ಗ್ರಾಮೀಣ ಕ್ಷೇತ್ರದ ಐತಿಹಾಸಿಕ ಅಭಿವೃದ್ಧಿಗೆ ಕ್ಷೇತ್ರದ ಜನರೇ ಸಾಕ್ಷಿಯಾಗಿದ್ದಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.
 ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಬೇವಾಡಿ ಗ್ರಾಮದಲ್ಲಿ 4.5 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗಳಿಗೆ ಪೂಜೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಅಪಪ್ರಚಾರ ಮಾಡುವವರಿಗೆಲ್ಲ ನಾನು ಉತ್ತರಿಸಬೇಕಾಗಿಲ್ಲ. ಕ್ಷೇತ್ರದ ಜನರಿಗೆ ನಾನು ಉತ್ತರಿಸುತ್ತೇನೆ, ಅವರಿಗೆ ಋಣಿಯಾಗಿರುತ್ತೇನೆ. ನಾನು ಮಾಡುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಜನರು ಮೆಚ್ಚಿಕೊಂಡಿದ್ದಾರೆ, ಸಹಕಾರ ನೀಡುತ್ತಿದ್ದಾರೆ. ಆದರೆ ಕೆಲವರು ತಮ್ಮಿಂದ ಅಭಿವೃದ್ಧಿ ಮಾಡಲಾಗದಿರುವುದಕ್ಕೆ ಕ್ಷೇತ್ರದ ಜನರ ಕ್ಷಮೆ ಕೇಳುವ ಬದಲು ಅಭಿವೃದ್ಧಿ ಮಾಡುತ್ತಿರುವ ನಮ್ಮ ಬಗ್ಗೆ ಅಸೂಯೆಪಟ್ಟುಕೊಂಡು ಅಪಪ್ರಚಾರದಲ್ಲಿ ತೊಡಗಿದ್ದಾರೆ. ಇದನ್ನೆಲ್ಲ ಜನರು ಗಮನಿಸುತ್ತಿದ್ದಾರೆ ಎಂದು ಅವರು ಹೇಳಿದರು.
ಪ್ರತಿ ಕಾಮಗಾರಿ ಗುಣಮಟ್ಟದ ಬಗ್ಗೆ ನಾವು ನಿಗಾ ವಹಿಸುತ್ತಿದ್ದೇವೆ. ಜನರೂ ಗಮನವಿಡುವಂತೆ ಎಲ್ಲಕಡೆ ವಿನಂತಿಸಿಕೊಳ್ಳುತ್ತೇನೆ. ಅತಿಯಾದ ಮಳೆಯಿಂದ ಕೆಲವು ಕಡೆ ರಸ್ತೆ ಹಾಳಾಗಿದೆ. ಇದು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ ಜಾಸ್ತಿಯಾಗಿದೆಯೋ ಅಲ್ಲೆಲ್ಲ ರಸ್ತೆಗಳು ಹಾಳಾಗಿವೆ. ಇಂತದಕ್ಕೆಲ್ಲ ಕೆಲವರು ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದಾರೆ ಎಂದು ಹೆಬ್ಬಾಳಕರ್ ಅಸಮಾಧಾನ ವ್ಯಕ್ತಪಡಿಸಿದರು.
 ಪಿ.ಎಮ್.ಜಿ.ಎಸ್. ವೈ ಯೋಜನೆಯಡಿಯಲ್ಲಿ ಇಲ್ಲಿಯ ಅನುದಾನ ಮಂಜೂರಾಗಿದ್ದು, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಮತ್ತು ಗುಣಮಟ್ಟ ಕಾಪಾಡಿಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದರು.

Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ