Breaking News

ಕಾಂಗ್ರೆಸ್ ಪಕ್ಷ ಹಾನಗಲ್ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಸಿಂದಗಿಯಲ್ಲಿ ಸೋತು ಗೆದ್ದಿದೆ

Spread the love

ಮೈಸೂರು: ಕಾಂಗ್ರೆಸ್ ಪಕ್ಷ ಹಾನಗಲ್ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಸಿಂದಗಿಯಲ್ಲಿ ಸೋತು ಗೆದ್ದಿದೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ‌.

ಸಿಂದಗಿ, ಹಾನಗಲ್ ಎರಡೂ ಕ್ಷೇತ್ರಗಳಲ್ಲೂ ಗೆಲ್ಲುವ ನಿರೀಕ್ಷೆ ಇತ್ತು,  ಆದರೂ ಹಾನಗಲ್‌ನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಸಿಂದಗಿಯಲ್ಲಿ ಕಳೆದ ಬಾರಿ ಕಾಂಗ್ರೆಸ್ ಪಕ್ಷ ಮೂರನೇ ಸ್ಥಾನಕ್ಕೆ ಬಂದಿತ್ತು, ಅಲ್ಲಿ ಜೆಡಿಎಸ್ ಪಕ್ಷ ಗೆಲುವು ಸಾಧಿಸಿತ್ತು ಆದರೆ ಈ ಬಾರಿ ಮೂರನೇ ಸ್ಥಾನದಲ್ಲಿದ್ದ ಕಾಂಗ್ರೆಸ್ ಪಕ್ಷ ಎರಡನೇ ಸ್ಥಾನಕ್ಕೆ ಬಂದಿರುವುದು ಆ ಕ್ಷೇತ್ರದ ಮತದಾರರು ಸಹ ಬದಲಾವಣೆ ಬಯಸಿದ್ದು ಮುಂದಿನ 2023 ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನತೆಯ ವಲವು ವ್ಯಕ್ತವಾಗುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡರುಗಳು ಹಗಲು ರಾತ್ರಿ ಎನ್ನದೆ ಶ್ರಮವಹಿಸಿದ್ದಾರೆ. ಪಕ್ಷದ ಗೆಲುವಿಗೆ ಕಾರಣಿಕರ್ತರಾದ ಕ್ಷೇತ್ರದ ಜನತೆ ಹಾಗೂ ಕಾರ್ಯಕರ್ತರುಗಳಿಗೆ ಮುಖಂಡರುಗಳಿಗೆ ನಾವು ಋಣಿಯಾಗಿದ್ದೇವೆ. ರಾಜ್ಯ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳಿಂದ ಜನತೆ ಬದಲಾವಣೆ ಬಯಸಿದ್ದು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು.


Spread the love

About Laxminews 24x7

Check Also

ಮೈಸೂರು ಅರಮನೆ ಮುಂಭಾಗ ಸಂಭವಿಸಿದ ಸ್ಫೋಟ ಅನಿರೀಕ್ಷಿತ,

Spread the loveಮೈಸೂರು: “ಮೈಸೂರು ಅರಮನೆ ಮುಂಭಾಗ ಸಂಭವಿಸಿದ ಸ್ಫೋಟ ಅನಿರೀಕ್ಷಿತ. ಸಿಲಿಂಡರಿನ​ ತಾಪಮಾನ ಹೆಚ್ಚಾಗಿ ಸ್ಫೋಟಗೊಂಡಿದೆ” ಎಂದು ಸಚಿವ ಡಾ.ಹೆಚ್​.ಸಿ.ಮಹದೇವಪ್ಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ