Breaking News

ಸೋಲಿಗೆ ನಾನೊಬ್ಬನೇ ಕಾರಣ ಅಲ್ಲ; ಸಾಮೂಹಿಕ ನಾಯಕತ್ವದ ಜಪಕ್ಕಿಳಿದ, ಕಾಂಗ್ರೆಸ್ ಅಭ್ಯರ್ಥಿ ಒಳ್ಳೆ ಕೆಲಸ ಮಾಡಿದ್ದರು:: ಬೊಮ್ಮಾಯಿ

Spread the love

ಹುಬ್ಬಳ್ಳಿ: ಹಾನಗಲ್ ಉಪ ಚುನಾವಣೆಯಲ್ಲಿ(Hangal By Election) ಬಿಜೆಪಿ(BJP) ಅಭ್ಯರ್ಥಿ ಶಿವರಾಜ ಸಜ್ಜನ್ ಸೋಲನುಭವಿಸಿದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai )ಸಾಮೂಹಿಕ ನಾಯಕತ್ವದ ಜಪ ಮಾಡಲಾರಂಭಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah), ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಬೊಮ್ಮಾಯಿ ನೇತೃತ್ವದಲ್ಲಿಯೇ ನಡೆಸೋದಾಗಿ ತಿಳಿಸಿದಾಗ, ಬೊಮ್ಮಾಯಿ ಒಳಗೊಳಗೆ ಬೀಗಿದ್ದರು.
ಆದರೆ ಹಾನಗಲ್ ನಲ್ಲಿಯೇ ಬೀಡು ಬಿಟ್ಟು, ಅರ್ಧ ಡಜನ್ ಗೂ ಹೆಚ್ಚು ಸಚಿವರನ್ನು ಸೇರಿಸಿಕೊಂಡು ರಣತಂತ್ರ ಹೆಣೆದರೂ ಹಾನಗಲ್ ನಲ್ಲಿ ಬಿಜೆಪಿ ಗೆಲ್ಲಲಾಗಿಲ್ಲ. ಹೀಗಾಗಿ ಈಗ ಬೊಮ್ಮಾಯಿ ಬಾಯಿಯಿಂದ ಸಾಮೂಹಿಕ ನಾಯಕತ್ವದ ಮಾತು ಕೇಳಿ ಬಂದಿವೆ.

ಸೋಲಿಗೆ ನಾನೊಬ್ಬನೇ ಕಾರಣನಲ್ಲ

ಉಪ ಚುನಾವಣೆಯ ಫಲಿತಾಂಶ ಮುಂದಿನ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಾಗುವುದಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಿದ್ದು ಸೋಲಿನ ಹೊಣೆಯನ್ನು ಎಲ್ಲರೂ ಹೊರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಹಾನಗಲ್ ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಿದೆ. ಸೋಲಿಗೆ ನಾನೊಬ್ಬನೇ ಕಾರಣನಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಮಾಡಿದ್ದೇವೆ. ಸೋಲಿನ ಹೊಣೆಯನ್ನು ಎಲ್ಲರೂ ಸಾಮೂಹಿಕವಾಗಿ ಹೊರುತ್ತೇವೆ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಒಳ್ಳೆ ಕೆಲಸ ಮಾಡಿದ್ದರು

ನಮ್ಮ ಕೇಂದ್ರದ ನಾಯಕ ಅಮಿತ್ ಶಾ ನನ್ನ ಹೆಸರು ಹೇಳಿದಾಗಲೇ ಹೇಳಿದ್ದೆ. ನಾನು ಒಬ್ಬ ತಂಡದ ಮುಖ್ಯಸ್ಥ ಇರಬಹುದು. ಆದ್ರೂ ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ಮಾಡುತ್ತೇವೆ ಎಂದಿದ್ದೆ. ಈಗಲೂ ಅದನ್ನೇ ಹೇಳುತ್ತೇನೆ. ಉದಾಸಿ ಇದ್ದಾಗಲೂ ಒಮ್ಮೆ ಬಿಜೆಪಿ – ಒಮ್ಮೆ ಕಾಂಗ್ರೆಸ್ ಗೆದ್ದು ಬರುತ್ತಿತ್ತು. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಯವರು ಕೋವಿಡ್ ಸಂದರ್ಭದಲ್ಲಿ ಮಾಡಿದ ಜನಪರ‌ ಕೆಲಸಗಳನ್ನು ಜನರು ಬೆಂಬಲಿಸಿದ್ದಾ


Spread the love

About Laxminews 24x7

Check Also

20 ವರ್ಷಕ್ಕೂ ಮೇಲ್ಪಟ್ಟು ಸೆರೆವಾಸಕ್ಕೆ ಗುರಿಯಾದವರ ಶಿಕ್ಷೆ ಮಾಫಿ ಮನವಿ ತಿರಸ್ಕರಿಸಬೇಕೆಂಬ ನಿಯಮವಿಲ್ಲ: ಹೈಕೋರ್ಟ್

Spread the loveಬೆಂಗಳೂರು: ಇಪ್ಪತಕ್ಕೂ ಹೆಚ್ಚು ವರ್ಷಗಳ ಕಾಲ ಸೆರೆವಾಸಕ್ಕೊಳಗಾಗುವ ಅಪರಾಧಿಗಳು ನಿಗದಿತ ಅವಧಿಯ ಜೈಲು ವಾಸದ ಬಳಿಕ ಶಿಕ್ಷೆಯ ಮಾಫಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ