Breaking News

ಬಸವರಾಜ ಬೊಮ್ಮಾಯಿ ಕುಟುಂಬ ಸಮೇತವಾಗಿ ಯಲ್ಲಮ್ಮನಗುಡ್ಡಕ್ಕೆ ಭೇಟಿ

Spread the love

ಬೆಳಗಾವಿ: ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಂಬ ಸಮೇತವಾಗಿ ಭೇಟಿ ನೀಡಿದರು. ತಮ್ಮ ಕುಲದೇವತೆ ಆದಿಶಕ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದರ್ಶನಾಶೀರ್ವಾದ ಪಡೆದುಕೊಂಡರು.

ಎಣ್ಣೆಹೊಂಡ ಹಾಗೂ ಪರಶುರಾಮ ಮತ್ತು ಯಲ್ಲಮ್ಮ ದೇವಸ್ಥಾನ ಪ್ರಾಂಗಣದಲ್ಲಿರುವ ದೇವಸ್ಥಾನಗಳಿಗೂ ಭೇಟಿ ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲರ ಅಮ್ಮ ಯಲ್ಲಮ್ಮ ದೇವಿ ದರ್ಶನ ಪಡೆದು, ನಾಡಿನ ಜನರ ಒಳಿತಿಗಾಗಿ ಪ್ರಾರ್ಥಿಸಿದ್ದೇನೆ. ದೀಪಾವಳಿ ಎಲ್ಲರ ಬಾಳಲ್ಲೂ ಬೆಳಕು ಮೂಡಿಸಲಿ ಎಂದು ಆಶಿಸಿದರು.

ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ, ಡಿಸಿ ಎಂ.ಜಿ.ಹಿರೇಮಠ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ