ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಬೋಟಿಗೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
ಅರಬ್ಬಿ ಸಮುದ್ರದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಯಾವುದೇ ಪ್ರಾಣಾಪಾಯವಾಗಲಿಲ್ಲ.
ಬೋಟಿನಲ್ಲಿದ್ದ ಏಳು ಮೀನುಗಾರರ ರಕ್ಷಣೆ ಮಾಡಲಾಗಿದೆ.
ವರದ ವಿನಾಯಕ ಹೆಸರಿನ ಮೀನುಗಾರಿಕೆ ಬೋಟ್ ಇದಾಗಿದ್ದು, ಬೋಟಿನ ಎಂಜಿನ್‌ನಲ್ಲಿ ಆಗಿರುವ ಅನಾಹುತ ಇದಾಗಿದೆ. ಬ್ಯಾಟರಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಉಂಟಾಗಿರುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.