Breaking News

ರಾಜಮೌಳಿ ನಿರ್ದೇಶನದಲ್ಲಿ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ನಟನೆ

Spread the love

ಹೈದರಾಬಾದ್: ಟಾಲಿವುಡ್ ಸ್ಟಾರ್ ಮಹೇಶ್ ಬಾಬು ಅವರೊಂದಿಗೆ ತಮ್ಮ ಮುಂದಿನ ಸಿನಿಮಾ ಮಾಡುವುದಾಗಿ ಖ್ಯಾತ ನಿರ್ದೇಶಕ ಎಸ್‍ಎಸ್ ರಾಜಮೌಳಿ ಹೇಳಿದ್ದಾರೆ. ಆ ಮೂಲಕ ಟಾಲಿವುಡ್‍ನಲ್ಲಿ ಬಹುದಿನಗಳಿಂದ ಕೇಳಿ ಬರುತ್ತಿದ್ದ ಕ್ರೇಜಿ ಕಾಂಬಿನೇಷನ್ ಸುದ್ದಿಗಳಿಗೆ ತೆರೆ ಹೇಳಿದಿದ್ದಾರೆ.

ಸದ್ಯ ಎನ್‍ಟಿಆರ್, ರಾಮ್ ಚರಣ್ ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ಆರ್‌ಆರ್‌ಆರ್ ಸಿನಿಮಾದಲ್ಲಿ ರಾಜಮೌಳಿ ಬ್ಯುಸಿಯಾಗಿದ್ದಾರೆ. ಇದೇ ವೇಳೆ ಮಹೇಶ್ ಬಾಬು ಅವರೊಂದಿಗೆ ತಮ್ಮ ಮುಂದಿನ ಸಿನಿಮಾ ಎಂದು ಘೋಷಣೆ ಮಾಡುವ ಮೂಲಕ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದಾರೆ. ಅಲ್ಲದೇ ಚಿತ್ರದ ಕುರಿತು ಕೆಲ ಮಾಹಿತಿಗಳನ್ನು ಬಿಟ್ಟುಕೊಟ್ಟಿದ್ದಾರೆ.

ಟಾಲಿವುಡ್ ಕ್ರೇಜಿ ಕಾಂಬಿನೇಷನ್ ಎಂದೇ ಸುದ್ದಿಯಾಗುತ್ತಿದ್ದ ಮಹೇಶ್ ಬಾಬು ಹಾಗೂ ರಾಜಮೌಳಿ ಅವರ ಸಿನಿಮಾವನ್ನು ದುರ್ಗಾ ಆಟ್ರ್ಸ್ ಬ್ಯಾನರ್ ಅಡಿ ಕೆಎಲ್ ನಾರಾಯಣ ನಿರ್ಮಾಣ ಮಾಡುತ್ತಿದೆ. ನಮ್ಮ ಮೂವರ ಕಾಂಬಿನೇಷನ್‍ನಲ್ಲಿ ಸಿನಿಮಾ ಮಾಡಬೇಕೆಂಬ ಯೋಚನೆ ಬಹಳ ದಿನಗಳಿಂದ ಇತ್ತು ಎಂದು ರಾಜಮೌಳಿ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಆರ್‌ಆರ್‌ಆರ್ ಸಿನಿಮಾ ಕುರಿತು ಮಾತನಾಡಿರುವ ರಾಜಮೌಳಿ ಅವರು, ಲಾಕ್‍ಡೌನ್ ಮುನ್ನವೇ ಚಿತ್ರದ ಶೇ.80 ಶೂಟಿಂಗ್ ಪೂರ್ಣಗೊಳಿಸಿದ್ದೇವೆ. ಸದ್ಯ ನಮ್ಮ ತಂಡದ ವರ್ಕ್ ಫ್ರಮ್ ಹೋಂ ಮಾಡುತ್ತಿದೆ. ಇತ್ತ ವಿಜ್ಯುವಲ್ ಎಫೆಕ್ಟ್ ಕೆಲಸ ಕೂಡ ನಡೆಯುತ್ತಿದೆ. ನಾವು ಅಂದುಕೊಂಡಿರುವ ಸಮಯಕ್ಕೆ ಸಿನಿಮಾ ಬಿಡುಗಡೆ ಮಾಡುತ್ತೇವೆ. ಆದರೆ ಲಾಕ್‍ಡೌನ್ ವೇಳೆಯಲ್ಲಿ ರಾಮ್ ಚರಣ್ ವಿಡಿಯೋವನ್ನು ಬಿಡುಗಡೆ ಮಾಡುವುದಕ್ಕೆ ತುಂಬಾ ಯೋಚನೆ ಮಾಡಿದ್ದೇವೆ. ಬಳಿಕ ಎಲ್ಲರೂ ಮನೆಯಲ್ಲಿ ಕುಳಿತು ಕೊಂಡು ಈ ಬಗ್ಗೆ ಮಾತನಾಡಿಕೊಳ್ಳುತ್ತಾರೆ ಎಂದು ತೀರ್ಮಾನಿಸಿ ಬಿಡುಗಡೆ ಮಾಡಿದ್ದಾಗಿ ತಿಳಿಸಿದ್ದಾರೆ.

ಆರ್‌ಆರ್‌ಆರ್ ಸಿನಿಮಾದಲ್ಲಿ ಎನ್‍ಟಿಆರ್, ರಾಮ್ ಚರಣ್ ನಟಿಸುತ್ತಿದ್ದಾರೆ. ಇತ್ತೀಚೆಗೆ ಸಿನಿಮಾದ ಟೀಸರ್ ಬಿಡುಗಡೆ ಮಾಡಿದ್ದ ಚಿತ್ರತಂಡ ಅಭಿಮಾನಿಗಳ ಕುತೂಹಲವನ್ನು ಹೆಚ್ಚಿಸಿತ್ತು. ಟೀಸರಿನಲ್ಲಿ ಎನ್‍ಟಿಆರ್ ನೀರಿನ ಪ್ರತಿರೂಪವಾಗಿ ಕಾಣಿಸಿಕೊಂಡರೆ, ರಾಮ್ ಚರಣ್ ಬೆಂಕಿಯ ರೂಪವಾಗಿ ಕಾಣಿಸಿಕೊಂಡಿದ್ದಾರೆ. ಈ ಎರಡು ಶಕ್ತಿಗಳು ಒಂದಾದರೆ ಏನಾಗಬಹುದು ಎಂಬುದನ್ನು ಸಿನಿಮಾದಲ್ಲಿ ತೋರಿಸಲಾಗಿದೆಯಂತೆ. ರಾಜಮೌಳಿ ನಿರ್ದೇಶನದ ಈ ಸಿನಿಮಾಕ್ಕೆ ಡಿವಿವಿ ದಾನಯ್ಯ ಬಂಡವಾಳ ಹೂಡಿದ್ದಾರೆ. ಇಡೀ ಸಿನಿಮಾ 1920ರ ಕಾಲಘಟ್ಟದಲ್ಲಿ ನಡೆಯಲಿದೆಯಂತೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ