ಬೆಳಗಾವಿ ತಾಲೂಕಿನ ದೇಸೂರ ಗ್ರಾಮದಲ್ಲಿ ಕನ್ನಡ ಬಾವುಟಕ್ಕೆ ಅವಮಾನ ಮಾಡಿದ ನಾಡದ್ರೋಹಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಬೆಳಗಾವಿಯ ರಾಣಿ ಚನ್ನಮ್ಮಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪದಾಧಿಕಾರಿಗಳು ಕನ್ನಡ ರಾಜ್ಯೋತ್ಸವ ಎರಡು ದಿನ ಆಗುವಷ್ಟರಲ್ಲಿ ದೇಸೂರ ಗ್ರಾಮದಲ್ಲಿ ಕನ್ನಡ ಬಾವುಟವನ್ನು ಹರಿದು ಹಾಕುವ ಮೂಲಕ ಕನ್ನಡಿಗರ ಭಾವನೆಗೆ ಧಕ್ಕೆ ತರುವ ಕೆಲಸವನ್ನು ನಾಡದ್ರೋಹಿಗಳು ಮಾಡಿದ್ದಾರೆ. ಹೀಗಾಗಿ ತಕ್ಷಣವೇ ನಾಡದ್ರೋಹಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಅದೇ ರೀತಿ ಗ್ರಾಮದಲ್ಲಿ ಶಾಶ್ವತವಾಗಿ ಕನ್ನಡ ಬಾವುಟ ಹಾರಾಡುವಂತೆ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಯುವ ಘಟಕದ ಜಿಲ್ಲಾಧ್ಯಕ್ಷ ಈರನಗೌಡ ಪಾಟೀಲ್, ಜಿಲ್ಲಾ ಉಪಾಧ್ಯಕ್ಷ ರಾಜು ಯರಗಾನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.