Breaking News

ಬಸವರಾಜ್ ಹೊರಟ್ಟಿ ಅವರು ಸುವರ್ಣಸೌಧಕ್ಕೆ ಭೇಟಿ ನೀಡಲಿದ್ದಾರೆ, ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Spread the love

ಕಳೆದ ಎರಡು ವರ್ಷಗಳಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ನಡೆದಿಲ್ಲ. ಆದರೆ ಈ ಬಾರಿ ಬೆಳಗಾವಿಯಲ್ಲಿಯೇ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಹೌದು ಈ ಭಾಗದ ಜನರ ಒತ್ತಾಯದ ಮೇರೆಗೆ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ಈಗಾಗಲೇ ತೀರ್ಮಾನ ಕೈಗೊಂಡಿದೆ. ಆದರೆ ಇನ್ನು ಕೂಡ ದಿನಾಂಕ ನಿಗದಿ ಆಗಿಲ್ಲ. ಈ ಮಧ್ಯ ಸೋಮವಾರ ವಿಧಾನಪರಿಷತ್‍ನ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಸುವರ್ಣಸೌಧಕ್ಕೆ ಭೇಟಿ ನೀಡಲಿದ್ದಾರೆ. ಅಗತ್ಯ ಇರುವ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಇದೇ ವೇಳೆ ಮಾಧ್ಯಮ ಮಿತ್ರರ ಜೊತೆಗೆ ಮಹತ್ವದ ಸಭೆಯನ್ನು ಕೂಡ ಬಸವರಾಜ್ ಹೊರಟ್ಟಿ ಅವರು ನಡೆಸಲಿದ್ದಾರೆ ಎಂದು ವಿಧಾನಪರಿಷತ್ ಸಭಾಪತಿಯವರ ಆಪ್ತ ಕಾರ್ಯದರ್ಶಿ ಡಾ.ಜಿ.ವಿಶ್ವನಾಥ್ ತಿಳಿಸಿದ್ದಾರೆ.


Spread the love

About Laxminews 24x7

Check Also

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ*

Spread the love 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ(ಶಿಡ್ಲಘಟ್ಟ), …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ