Breaking News

ರಾಜ್ಯ ಸರ್ಕಾರ ಜನರ ಜೀವದ ಜೊತೆ ಆಟವಾಡುತ್ತಿದೆಯಾ? ಸರ್ಕಾರವೇ ಕೊರೊನಾ ಸೋಂಕು ಹರಡಿಸುತ್ತಿದೆಯಾ?

Spread the love

ಬೆಂಗಳೂರು: ರಾಜ್ಯ ಸರ್ಕಾರ ಜನರ ಜೀವದ ಜೊತೆ ಆಟವಾಡುತ್ತಿದೆಯಾ? ಸರ್ಕಾರವೇ ಕೊರೊನಾ ಸೋಂಕು ಹರಡಿಸುತ್ತಿದೆಯಾ ಎಂಬ ಅನುಮಾನ ಶುರುವಾಗಿದೆ.

ಹೌದು, ಸರ್ಕಾರ ನೀಡುತ್ತಿರುವ ಉಚಿತ ಹಾಲು ಪಡೆಯಲು ಜನರು ಕಿಲೋ ಮೀಟರ್ ಗಟ್ಟಲೇ ಕ್ಯೂ ನಿಲ್ಲುತ್ತಿದ್ದಾರೆ. ಕೆಲವೊಮ್ಮೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದ ಪ್ರಸಂಗಗಳನ್ನು ವರದಿಯಾಗಿವೆ. ಇಂತಹದ್ದೇ ಪ್ರಸಂಗ ಇಂದು ಮಲ್ಲೇಶ್ವರಂನ ದತ್ತಾತ್ರೇಯ ವಾರ್ಡ್ ನಲ್ಲಿ ನಡೆದಿದೆ.

ಮಲ್ಲೇಶ್ವರಂನ ದತ್ತಾತ್ರೇಯ ವಾರ್ಡ್‍ನಲ್ಲಿ ಬೆಳಗ್ಗೆ 7 ಗಂಟೆಗೆ ಉಚಿತ ಹಾಲು ವಿತರಣೆ ಮಾಡಲಾಗುತ್ತದೆ. ಈ ಹಾಲನ್ನು ಪಡೆಯಲು ಜನರು ಬೆಳಗ್ಗೆ 5 ಗಂಟೆಗೆ ಕ್ಯೂ ನಿಂತಿದ್ದರು. ಹೀಗಾಗಿ ಒಂದೂವರೆ ಕಿ.ಮೀ ಉದ್ದ ಕ್ಯೂ ಇಲ್ಲಿತ್ತು. ಅಷ್ಟೇ ಅಲ್ಲದೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮಕ್ಕಳು, ವೃದ್ಧರು ಸೇರಿದಂತೆ ನೂರಾರು ಜನರು ಕ್ಯೂನಲ್ಲಿ ನಿಂತಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ