ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಮೃತ ಯೋಜನೆಯಡಿ 7,500 ಸ್ತ್ರೀಶಕ್ತಿ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ 1 ಲಕ್ಷ ರೂ.ಗಳ ಅನುದಾನ ನೀಡುವ ಯೋಜನೆಯನ್ನು ಘೋಷಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕೇಂದ್ರ ಪಂಚಾಯತ್ ರಾಜ್ ಸಚಿವ ಕಪಿಲ್ ಮೊರೇಶ್ವರ ಪಾಟೀಲ್ ಅವರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ 5,690 ಗ್ರಾಮ ಪಂಚಾಯಿತಿಗಳಿಗೆ ಈಗಾಗಲೇ ಅಂತರ್ಜಾಲ ವ್ಯವಸ್ಥೆ ಕಲ್ಪಿಸಲಾಗಿದ್ದು, ಕಟ್ಟ ಕಡೆಯ ವ್ಯಕ್ತಿಗೂ ಅಂತರ್ಜಾಲ ಸೌಲಭ್ಯ ಕಲ್ಪಿಸುವುದು ಸರ್ಕಾರದ ಗುರಿಯಾಗಿದೆ ಎಂದು ಹೇಳಿದ್ದಾರೆ.