Breaking News

ಅಪ್ಪು’ ಕಂಡಿದ್ದ ಕನಸು ನನಸು ಮಾಡುವ ಸಣ್ಣ ಪ್ರಯತ್ನ: ಸಚಿವ ಮುರುಗೇಶ್ ನಿರಾಣಿ!

Spread the love

ಬೆಂಗಳೂರು, ನ. 09: ತಮ್ಮ ನಡೆ, ನುಡಿ, ಸರಳತೆ, ಸಮಾಜ ಸೇವೆ ಮೂಲಕ ಯುವ ಜನತೆಗೆ ಮಾದರಿಯಾಗಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ಇದೇ ನವೆಂಬರ್ 11 ರಂದು ಕಲಬುರಗಿಯಲ್ಲಿ ನಡೆಯಲಿರುವ ‘ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಾಗಾರದ ವೇದಿಕೆಗೆ ಹೆಸರಿಡಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತೀರ್ಮಾನಿಸಿದ್ದಾರೆ.

 

ನವೆಂಬರ್ 11 ರಂದು ಕಲಬುರಗಿಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ವತಿಯಿಂದ ಉದ್ಯಮಿಯಾಗಿ ಉದ್ಯೋಗ ನೀಡು ಮತ್ತು ಕೈಗಾರಿಕೆ ಅದಾಲತ್ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಕಾರ್ಯಾಗಾರ ನಡೆಯುವ ವೇದಿಕೆಗೆ “ಪುನೀತ್ ರಾಜ್ ಕುಮಾರ್” ಎಂದು ಹೆಸರಿಟ್ಟು ಆಗಲಿದ ಮೇರು ನಟನೆಗೆ ಗೌರವ ಸಮರ್ಪಣೆ ಸಲ್ಲಿಸಲು ಬೃಹತ್ ಕೈಗಾರಿಕಾ ಇಲಾಖೆ ಮುಂದಾಗಿದೆ.

ಕಲಬುರಗಿಯಲ್ಲಿ ಮಾತ್ರವಲ್ಲ, ಮುಂದೆ ನಡೆಯಲಿರುವ ಮೈಸೂರು, ಬೆಳಗಾವಿ, ಕರಾವಳಿ ಭಾಗದ ಮಂಗಳೂರು ಹಾಗೂ ತುಮಕೂರಿನಲ್ಲಿ “ಉದ್ಯಮಿಯಾಗು ಉದ್ಯೋಗ ನೀಡು” ಕಾರ್ಯಕ್ರಮದ ವೇದಿಕೆಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಸಚಿವ ಮುರುಗೇಶ್ ನಿರಾಣಿ ಮುಂದಾಗಿದ್ದಾರೆ.

ಸಿನಿಮಾ ಕ್ಷೇತ್ರಕ್ಕೆ ಮಾತ್ರ ಸೀಮಿತರಾಗಿರಲಿಲ್ಲ!
 “ಕೇವಲ ಸಿನಿಮಾ ಕ್ಷೇತ್ರಕ್ಕೆ ಗುರುತಿಸಿಕೊಳ್ಳದ ಪುನೀತ್ ರಾಜ್ ಕುಮಾರ್ ಅನೇಕ ಸಮಾಜ‌ ಸೇವೆಗಳಲ್ಲೂ ತೊಡಗಿಸಿಕೊಂಡಿದ್ದರು. ನಿಜ ಜೀವನದಲ್ಲಿ ಪುನೀತ್ ರಾಜ್ ಕುಮಾರ್ ರಾಜಕುಮಾರನಾಗಿಯೇ ಮೆರೆದರು. ಮುಂದಿನ ಯುವಜನಾಂಗಕ್ಕೆ ಅವರ ಹೆಸರು “ಆಜಾರಮರಗೊಳಿಸಲು” ಈ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿರುವುದಾಗಿ ಸಚಿವ ಮುರುಗೇಸ್ ನಿರಾಣಿ ತಿಳಿಸಿದ್ದಾರೆ.

ಅಪ್ಪು ಕಂಡಿದ್ದ ಕನಸು ನನಸು ಮಾಡುವ ಸಣ್ಣ ಪ್ರಯತ್ನ

“ಯುವಜನತೆಯು ಯಾರೊಬ್ಬರ ಮೇಲೆ ಅವಲಂಬಿತರಾಗದೆ, ಸ್ವಾವಲಂಬಿಗಳಾಗಿ ಬದುಕಬೇಕು ಎಂಬುದು ಅಪ್ಪು ಅವರ ಕನಸಾಗಿತ್ತು. ಅವರು ಕಂಡಿದ್ದ ಕನಸನ್ನು ನನಸು ಮಾಡುವ ಸಣ್ಣ ಪ್ರಯತ್ನ ಇದಾಗಿದೆ. ಪುನೀತ್​ ರಾಜ್​ಕುಮಾರ್​ ನಟನಾಗಿ ಮಾತ್ರವಲ್ಲ ನಿರ್ಮಾಪಕನಾಗಿಯೂ ಉದ್ಯಮಶೀಲತೆ ತೋರಿದರು. ಅವರು ಪಿಆರ್​ಕೆ ಪ್ರೊಡಕ್ಷನ್​ ಆರಂಭಿಸುವ ಮೂಲಕ ಸಿನಿಮಾ ನಿರ್ಮಾಣದಲ್ಲಿಯೂ ತೊಡಗಿಕೊಂಡಿದ್ದರು. ಹೊಸ ಪ್ರತಿಭೆಗಳಿಗೆ ಮಣೆ ಹಾಕುವ ಮೂಲಕ ಸ್ಯಾಂಡಲ್​ವುಡ್​​ನಲ್ಲಿ ಅವರು ಎಲ್ಲರಿಂದಲೂ ಮೆಚ್ಚುಗೆ ಗಳಿಸಿದ್ದರು” ಎಂದು ಸಚಿವ ನಿರಾಣಿ ಅವರು ಪುನೀತ್ ರಾಜ್‌ಕುಮಾರ್ ಅವರನ್ನು ಗೌರವಿಸಿದ್ದಾರೆ.

ದೊಡ್ಡಮನೆಯ ದೊಡ್ಡತನ ಮೆರೆದಿದ್ದ ಪುನೀತ್ ರಾಜ್‌ಕುಮಾರ್!

ಕೇವಲ ಸಿನಿಮಾ ಕ್ಷೇತ್ರವಲ್ಲದೆ, ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವೃದ್ಧರ ಮತ್ತು ಅನಾಥರ ಪೋಷಣೆ ಜತೆಗೆ ಹೆಣ್ಣು ಮಕ್ಕಳಿಗೆ ಶಿಕ್ಷಣ ಧಾರೆ ಎರೆದಿದ್ದರು. ಗೋ ಶಾಲೆಗಳನ್ನು ಪೋಷಣೆ ಮಾಡುತ್ತಿದ್ದರು. ತಾನು ಸಮಾಜಕ್ಕೆ ಈ ಕೊಡುಗೆ ಕೊಟ್ಟಿದ್ದೇನೆ ಎಂದು ಎಲ್ಲೂ ಬಹಿರಂಗಪಡಿಸದೇ ಸಮಾಜ ಸೇವೆ ಮಾಡುತ್ತಿದ್ದರು. ಈ ಮೂಲಕ ದೊಡ್ಡಮನೆಯ ದೊಡ್ಡತನ ಮೆರೆದಿದ್ದರು. ಅಂತಹ ಮೇರುನಟ ನಮಗೆ ಎಂದೆಂದಿಗೂ ಮಾದರಿ ಎಂದು ಸಚಿವ ನಿರಾಣಿ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಚಿವ ನಿರಾಣಿ ಭಾಗಿ!

ಸೋಮವಾರ ನಡೆದ ಪುನೀತ್ ರಾಜ್ ಕುಮಾರ್ ಅವರ 11 ದಿನದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಚಿವ ನಿರಾಣಿ ಅವರು ಭಾಗವಹಿಸಿ ಆಗಲಿದ ಯುವನಟನಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಸದಾಶಿವ ನಗರದಲ್ಲಿರುವ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ತೆರಳಿದ್ದ ಅವರು ಅಪ್ಪುವಿನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ‌ಗೌರವ ನಮನ ಸಲ್ಲಿಸಿದರು. ಬಳಿಕ ಪುನೀತ್ ರಾಜ್ ಕುಮಾರ್ ಪತ್ನಿ ಶ್ರೀಮತಿ ಅಶ್ವಿನಿ, ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ನಂತರ ಪುನೀತ್ ರಾಜ್ ಕುಮಾರ್ ಸಹೋದರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ಮಧು ಬಂಗಾರಪ್ಪ, ‌ಸೇರಿದಂತೆ ಮತ್ತಿತರರ ಜೊತೆ ಪ್ರಸಾದ ಸೇವಿಸಿದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ