Breaking News

ಶಾಸಕ ರಮೇಶ್ ಜಾರಕಿಹೊಳಿ ಪ್ರಕರಣ ನ.29ಕ್ಕೆ ಮುಂದೂಡಿದೆ.

Spread the love

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಹಾಗೂ ಸುಲಿಗೆ ಆರೋಪದ ಪ್ರತಿ ದೂರು ಕುರಿತ ವರದಿಗಳನ್ನು ಪರಿಶೀಲಿಸುವಂತೆ ಹೈಕೋರ್ಟ್ ಬೆಂಗಳೂರು ಪೊಲೀಸ್ ವಿಶೇಷ ತನಿಖಾ ತಂಡದ ಮುಖ್ಯಸ್ಥರಿಗೆ ಸೂಚಿಸಿದೆ.

ಪ್ರಕರಣದ ವರದಿಯನ್ನು ಎಸ್ ಐಟಿ ಹೈಕೋರ್ಟ್ ಗೆ ಸಲ್ಲಿಸಿದಾಗ ಅವುಗಳನ್ನು ಕೆಳ ಅಥವಾ ಅಧೀನ ನ್ಯಾಯಾಲದಲ್ಲಿ ಸಲ್ಲಿಸಲು ಅನುಮತಿ ಕೋರಿತ್ತು. ವೈಯಕಿಕ ಕಾರಣಗಳಿಂದಾಗಿ ಮೇಯಿಂದ ಜುಲೈವರೆಗೆ ತನಿಖೆಯ ಪ್ರಮುಖ ಭಾಗದ ಸಂದರ್ಭದಲ್ಲಿ ಎಸ್ ಐಟಿ ಮುಖ್ಯಸ್ಥರು ರಜೆಯ ಮೇಲೆ ತೆರಳಿದ್ದರು. ಈ ಬಗ್ಗೆ ಹೈಕೋರ್ಟ್ ಪ್ರಶ್ನೆ ಮಾಡಿದೆ.

ಎಸ್ ಐಟಿ ತನಿಖೆಯ ಅಂತಿಮ ವರದಿಯನ್ನು ನ್ಯಾಯಾಲಯದ ಮುಂದೆ ಸಲ್ಲಿಸಲು ರಾಜ್ಯ ಅಡ್ವಕೇಟ್ ಜನರಲ್ ಮಾಡಿದ ಮನವಿ ತಿರಸ್ಕರಿಸಿದ ಹೈಕೋರ್ಟ್, ಶಾಸಕರ ವಿರುದ್ಧದ ಅತ್ಯಾಚಾರ ಆರೋಪ ಹಾಗೂ ಶಾಸಕರು ಮಾಡಿದ ಸುಲಿಗೆ ಆರೋಪಗಳ ಸಮಾನಾಂತರ ತನಿಖೆ ನಡೆಸುವಂತೆ ಸೂಚಿಸಿದೆ. ಎಸ್ ಐಟಿ ಮುಖ್ಯಸ್ಥರು ತನಿಖಾ ವರದಿಯನ್ನು ಪರಿಶೀಲಿಸಿ ವರದಿಗೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯವನ್ನು ಸಲ್ಲಿಸಲು ಹೇಳಿದೆ. ಅಲ್ಲದೇ ಪ್ರಕರಣದ ವಿಚಾರಣೆಯನ್ನು ನ.29ಕ್ಕೆ ಮುಂದೂಡಿದೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ