ಕಾಂಗ್ರೆಸ್‍ನವರು ಬದುಕಿದ್ದೇವೆ ಎಂದು ತೋರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಬಿಟ್ ಕಾಯಿನ್ ದಂಧೆ ಬಗ್ಗೆ ಮಾತಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಸ್ಪರ್ಧಾತ್ಮಕವಾಗಿ ಮಾತನಾಡುತ್ತಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದರು.
ಬಿಟ್ ಕಾಯಿನ್ ದಂಧೆಯ ತನಿಖೆ ಪಾರದರ್ಶಕವಾಗಿ ನಡೆದರೆ ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರದಿಂದ ಕೆಳಗೆ ಇಳಿಯಬೇಕಾಗುತ್ತದೆ. ಬಿಜೆಪಿಯಲ್ಲಿ ಮೂರನೇ ಹೊಸ ಮುಖ್ಯಮಂತ್ರಿ ನೇಮಕವಾಗಬೇಕಾದ ಪರಿಸ್ಥಿತಿ ಎದುರಾಗುತ್ತದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಈಶ್ವರಪ್ಪ ನಾ ಮುಂದು ತಾ ಮುಂದು ಎಂದು ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ.
ಸಿದ್ದರಾಮಯ್ಯ ಡಿಕೆಶಿ ಬಳಿಕ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಮಾತಾಡುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಬೇಜವ್ದಾರಿಯಾಗಿ ಮಾತನಾಡಿದ್ದಾರೆ. ಬಿಟ್ ಕಾಯಿನ್ ದಂಧೆ ಬಗ್ಗೆ ಚೂರು ಪೇಪರ್ ಇದ್ರೂ ಬಹಿರಂಗಪಡಿಸಲಿ. ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಆ ಭಾಗದಲ್ಲಿ ವಸೂಲಿ ಕಿಂಗ್ ಎಂದು ಹರಿಹಾಯ್ದರು.