Breaking News

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೇ ಬಿಟ್ ಕಾಯಿನ್ ದಂಧೆ ನಡೆದಿದೆ: ರಾಜ್ಯ ಬಿಜೆಪಿ ಘಟಕ

Spread the love

ಬೆಂಗಳೂರು: ಬಿಟ್ ಕಾಯಿನ್ ವಿಚಾರವಾಗಿ ರಾಜಕೀಯ ನಾಯಕರ ಬಡಿದಾಟ ಮುಂದುವರೆದಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೇ ಬಿಟ್ ಕಾಯಿನ್ ದಂಧೆ ನಡೆದಿದೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.

ಬಿಟ್ ಕಾಯಿನ್ ದಂಧೆಯ ಆರೋಪಿ ಯುವ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಮಹಮ್ಮದ್ ನಲಪಾಡ್ ಹಾಗೂ ಮಾಜಿ ಸಚಿವ ಲಮಾಣಿ ಪುತ್ರ ದರ್ಶನ್ ನಡುವೆ ಅವ್ಯವಹಾರ ನಡೆಸಿರುವ ಬಗ್ಗೆ ನ್ಯಾಯಾಲಯಕ್ಕೆ ಸಲ್ಲಿಸಲಾದ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ ಎಂದು ಬಿಜೆಪಿ ತಿಳಿಸಿದೆ.

ಸರಣಿ ಟ್ವೀಟ್ ಮೂಲಕ ಕಿಡಿ ಕಾರಿರುವ ಬಿಜೆಪಿ, ಬಿಟ್ ಕಾಯಿನ್ ದಂಧೆ ಆರೋಪಿ ಶ್ರೀಕಿಯನ್ನು ಸಿದ್ದರಾಮಯ್ಯ ಅವಧಿಯಲ್ಲಿ ಬಂಧಿಸಿ ಬಿಡುಗಡೆಗೊಳಿಸಲಾಗಿತ್ತು. ಅದೇ ಸಿದ್ದರಾಮಯ್ಯ ಈಗ ಬಿಟ್ ಕಾಯಿನ್ ಆರೋಪಿಗೆ ಕಾಂಗ್ರೆಸ್ ನಾಯಕರ ಜೊತೆ ಇರುವ ಸಂಬಂಧವನ್ನು ಉಲ್ಲೇಖ ಮಾಡದೆ, ಬಿಜೆಪಿ ವಿರುದ್ಧ ಹೇಳಿಕೆ ನೀಡುತ್ತಿರುವುದು ದುರದೃಷ್ಟಕರ ಎಂದು ಹೇಳಿದೆ.

ಬಿಟ್ ಕಾಯಿನ್ ವಿಚಾರವಾಗಿ ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಪ್ರಕರಣ ಸಂಬಂಧ ಸಾಕ್ಷ್ಯಗಳಿದ್ದರೆ ಬಹಿರಂಗಪಡಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ