Breaking News

ವಿವಿಧ ಬೇಡಿಕೆ ಈಡೇರಿಸುವಂತೆ ನಂದಗಡ ಗ್ರಾಮಸ್ಥರಿಂದ ತಹಶೀಲ್ದಾರರ ಮೂಲಕ ಸಿಎಂಗೆ ಮನವಿ

Spread the love

ಖಾನಾಪುರ: ತಾಲೂಕಿನ ನಂದಗಡ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಬೇಕು. ಪ್ರಕೃತಿ ವಿಕೋಪದಲ್ಲಿ ಮನೆ ಕಳೆದಕೊಂಡವರಿಗೆ ಹಾಗೂ ಹಾನಿಗೊಳಗಾದ ರೈತರಿಗೆ ಶೀಘ್ರವೇ ಪರಿಹಾರ ನೀಡಬೇಕೆಂದು ಒತ್ತಾಯಿಸಿ ನಂದಗಡ ಗ್ರಾಮಸ್ಥರು ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.ರಾಯಣ್ಣನ ಪುಣ್ಯಭೂಮಿ ನಂದಗಡ ಹೆದ್ದಾರಿ ಪಕ್ಕದಲ್ಲಿದ್ದರೂ ಸರಿಯಾಗಿ ಬಸ್ ಸೌಲಭ್ಯವಿಲ್ಲದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಇನ್ನು ಕಳೆದ ಎರಡು ವರ್ಷಗಳಿಂದ ಸುರಿದ ಭಾರೀ ಮಳೆಗೆ ನಂದಗಡ ಗ್ರಾಮಸ್ಥರು ಕೆಲವರು ಮನೆಯನ್ನು ಕಳೆದುಕೊಂಡಿದ್ದಾರೆ. ಇನ್ನು ವಿಪರೀತ ಮಳೆಯಿಂದ ಕೆಲ ರೈತರ ಜಮೀನುಗಳಲ್ಲಿ ದೊಡ್ಡ ಕೊರಕಲುಗಳು ಉಂಟಾಗಿವೆ. ಹಾಗಾಗಿ ಈ ಎಲ್ಲಾ ರೈತರಿಗೂ ಕೂಡಲೇ ಪರಿಹಾರ ನೀಡಬೇಕೆಂದು ಒತ್ತಾಯಿಸಿ ನಂದಗಡ ಗ್ರಾಮಸ್ಥರು ಖಾನಾಪು ತಹಶೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆಯನ್ನು ನಡೆಸಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.ಈ ವೇಳೆ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ತಹಶೀಲ್ದಾರರು ನಂದಗಡ ಗ್ರಾಮಸ್ಥರ ಬೇಡಿಕೆಯನ್ನು ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ತಿಳಿಸುವುದಾಗಿ ಭರವಸೆ ನೀಡಿದರು.


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ