Breaking News

ರೈತರ ವಿರೋಧದ ನಡುವೆಯೂ ಮಚ್ಚೆ-ಹಲಗಾ ಬೈಪಾಸ್ ರಸ್ತೆ ಕಾಮಗಾರಿಯನ್ನು ಬೆಳಗಾವಿ ಜಿಲ್ಲಾಡಳಿತ ಮುಂದುವರೆಸಿದೆ.

Spread the love

ಬೆಳಗಾವಿ: ರೈತರ ವಿರೋಧದ ನಡುವೆಯೂ ಮಚ್ಚೆ-ಹಲಗಾ ಬೈಪಾಸ್ ರಸ್ತೆ ಕಾಮಗಾರಿಯನ್ನು ಬೆಳಗಾವಿ ಜಿಲ್ಲಾಡಳಿತ ಮುಂದುವರೆಸಿದೆ. ರಾಜ್ಯ ಸರ್ಕಾರದ ಆದೇಶದಂತೆ ಬೈಪಾಸ್ ಕಾಮಗಾರಿ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ರಸ್ತೆ ಕಾಮಗಾರಿಗಾಗಿ ಭೂ ಸ್ವಾಧೀನ ಪಡಿಸಿಕೊಂಡಿರುವ 825 ರೈತರಿಗೆ ಒಟ್ಟು 25 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಬೆಳೆಗಳನ್ನು ನಾಶ ಮಾಡದೇ ಕಾಮಗಾರಿ ನಡೆಸುವುದಾಗಿ ರೈತರಿಗೆ ಭರವಸೆ ನೀಡಲಾಗಿದೆ ಎಂದರು.

ಇನ್ನು ನಿನ್ನೆ ನಡೆದ ರೈತರ ಪ್ರತಿಭಟನೆ ವೇಳೆ ಯುವಕನೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಗೆ ಭೇಟಿ ನೀಡಿ ಆತನ ಆರೋಗ್ಯ ವಿಚಾರಿಸಿದ್ದೇನೆ ಎಂದು ಹೇಳಿದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ