Breaking News

ಪ್ರತಾಪ್ ಸಿಂಹ ಗಂಡೋ ಹೆಣ್ಣೋ ಚೆಕ್ ಮಾಡಿಸಲಿ; ಇಕ್ಬಾಲ್ ಅನ್ಸಾರಿ ವಾಗ್ದಾಳಿ

Spread the love

ಕೊಪ್ಪಳ: ಬಿಟ್ ಕಾಯಿನ್ ಬಡಿದಾಟ ರಾಜಕೀಯ ನಾಯಕರ ವೈಯಕ್ತಿಕ ವಾಗ್ದಾಳಿಗಳಿಗೂ ಕಾರಣವಾಗಿದ್ದು, ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೆಸರಿನ ಬಗ್ಗೆ ವ್ಯಂಗ್ಯವಾಡಿದ್ದ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿರುವ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಪ್ರತಾಪ್ ಸಿಂಹ ಗಂಡೋ ಹೆಣ್ಣೋ ಚೆಕ್ ಮಾಡಿಸಿಕೊಳ್ಳಬೇಕು ಎಂದಿದ್ದಾರೆ.

 

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಮಾತನಾಡಿದ ಇಕ್ಬಾಲ್ ಅನ್ಸಾರಿ, ಪ್ರತಾಪ್, ಪ್ರಿಯಾಂಕ್ ಖರ್ಗೆ ಹೆಸರಿನ ಬಗ್ಗೆ ವೈಯಕ್ತಿಕವಾಗಿ ಮಾತನಾಡಿರುವುದು ಖಂಡನೀಯ. ಆತ ಸಂಸದನಾಗಲು ಲಾಯಕ್ಕಿಲ್ಲ. ಯಾವುದೋ ಅಲೆಯಲ್ಲಿ ಆತನಿಗೆ ಜನರು ವೋಟ್ ಹಾಕಿದ್ದಾರೆ. ಆತನದು ಝಿರೋ ಟ್ಯಾಂಲೆಂಟ್ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರ

ಪ್ರಿಯಾಂಕ್ ಖರ್ಗೆ ವಿರುದ್ಧ ಮಾತನಾಡಿದ್ದಕ್ಕೆ ಪ್ರತಾಪ್ ಸಿಂಹ ಕ್ಷಮೆ ಯಾಚಿಸಬೇಕು. ಬಿಟ್ ಕಾಯಿನ್ ಹಗರಣ ಇಂದು ಅಂತರಾಷ್ಟ್ರೀಯ ಮಟ್ಟದ ಹಗರಣವಾಗಿದೆ. ಇದರಲ್ಲಿ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ. ತನಿಖಾ ಸಂಸ್ಥೆಯನ್ನೇ ಡೈವರ್ಟ್ ಮಾಡಲು ಬಿಜೆಪಿ ಯತ್ನಿಸಿದೆ. ಎಲ್ಲವನ್ನು ಮರೆ ಮಾಚುವ ಉದ್ದೇಶ ಸರ್ಕಾರದ್ದಾಗಿದೆ ಎಂದು ಕಿಡಿಕಾರಿದರು.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ