Breaking News

ಪುನೀತ್ ರಾಜಕುಮಾರ್ ಗೆ ‘ಭಾರತ ರತ್ನ’ ನೀಡಲು ಶರತ್ ಕುಮಾರ್ ಒತ್ತಾಯ

Spread the love

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡಬೇಕು ಎಂದು ನಟ ಶರತ್ ಕುಮಾರ್ ಹೇಳಿದ್ದಾರೆ.

‘ಪುನೀತ ನಮನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ಸರ್ಕಾರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿದೆ.

ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ. ಪುನೀತ್ ಅವರಿಗೆ ದೇಶದ ಅತ್ಯುನ್ನತ ಪ್ರಶಸ್ತಿಯಾದ ‘ಭಾರತ ರತ್ನ’ ನೀಡಬೇಕು ಎಂದು ಹೇಳಿದ್ದಾರೆ.

ಅಪ್ಪು ನಿಧನದ ಸುದ್ದಿ ಕೇಳಿ ದೇವರನ್ನು ಕ್ಷಮಿಸಲಾಗಲಿಲ್ಲ. ಪುನೀತ್ ರಾಜಕುಮಾರ್ ಸಮಾಜಕ್ಕೆ ಉತ್ತಮವಾದ ಸಂದೇಶ ನೀಡಿದ್ದಾರೆ. ಯಾರಿಗೂ ಗೊತ್ತಾಗದಂತೆ ಸಮಾಜ ಸೇವೆ ಮಾಡಿದ್ದಾರೆ. ನನ್ನ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಅಪ್ಪು ಬರುತ್ತಾರೆ ಎಂದುಕೊಂಡಿದ್ದೆ. ಆದರೆ, ನಾನೇ ಅವರ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಬರುವಂತಾಗಿದೆ ಎಂದು ಹೇಳಿದ ಶರತ್ ಕುಮಾರ್ ಭಾವುಕರಾಗಿದ್ದಾರೆ.


Spread the love

About Laxminews 24x7

Check Also

ಸೆಟ್ಟೇರಿತು ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾ..ಹೊಸ ನಿರ್ದೇಶಕರ ಜೊತೆ ಕೈ ಜೋಡಿಸಿದ ಕ್ರೇಜಿಸ್ಟಾರ್ ಪುತ್ರ

Spread the love ಸೆಟ್ಟೇರಿತು ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾ..ಹೊಸ ನಿರ್ದೇಶಕರ ಜೊತೆ ಕೈ ಜೋಡಿಸಿದ ಕ್ರೇಜಿಸ್ಟಾರ್ ಪುತ್ರ ಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ