ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಶೇ.50ರಷ್ಟು ವರ್ಕ್ ಫ್ರಂ ಹೋಂ ಗೆ ಸೂಚಿಸಲಾಗಿದೆ.
ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಹೆಚ್ಚುತ್ತಿದ್ದು, ಉಸಿರಾಟಕ್ಕೂ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾಗಶ: ಲಾಕ್ ಡೌನ್ ಜಾರಿಯಾದಂತಾಗಿದೆ. ಮುಂದಿನ ಆದೇಶದವರೆಗೆ ಶಾಲಾ-ಕಾಲೇಜುಗಳನ್ನು ಬಂದ್ ಮಾಡುವಂತೆ ವಾಯುಗುಣಮಟ್ಟ ನಿರ್ವಹಣಾ ಆಯೋಗ ತಿಳಿಸಿದೆ.
ದೆಹಲಿಯ 300 ಕಿ.ಮೀ ವ್ಯಾಪ್ತಿಯಲ್ಲಿರುವ 11 ಉಷ್ಣ ವಿದ್ಯುತ್ ಸ್ಥಾವರಗಳನ್ನು ನವೆಂಬರ್ 30ರವರೆಗೆ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. ದೆಹಲಿ ಒಳಗೆ ಬೃಹತ್ ಟ್ರಕ್ ಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಅಗತ್ಯ ವಸ್ತುಗಳನ್ನು ಸಾಗಿಸುವ ಟ್ರಕ್ ಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಇನ್ನು ನ.21ರವರೆಗೆ ಶೇ.50ರಷ್ಟು ವರ್ಕ್ ಫ್ರಂ ಹೋಂ ಗೆ ಸೂಚಿಸಲಾಗಿದೆ.
Laxmi News 24×7