ಶಿವಮೊಗ್ಗ: ಟಿಕೆಟ್ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ
ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಘೋಷಣೆ ಆಗುವ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ಆರ್. ಪ್ರಸನ್ನ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಟಿಕೆಟ್ಗಾಗಿ ಪೈಪೋಟಿ ನಡೆಯುತ್ತಿರುವಾಗಲೇ ಪ್ರಸನ್ನಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್ನಿಂದ ಆರ್. ಪ್ರಸನ್ನ ಕುಮಾರ್, ವೈ.ಹೆಚ್. ನಾಗರಾಜ್ ಟಿಕೆಟ್ ಆಕಾಂಕ್ಷಿಯಾಗಿದ್ದರು.ಇದೀಗ ಶಿವಮೊಗ್ಗ ಜಿಲ್ಲೆಯ 1 ಸ್ಥಾನಕ್ಕೆ ಪ್ರಸನ್ನ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್. ಪ್ರಸನ್ನ ಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
