ನಾದಬ್ರಹ್ಮ ಹಂಸಲೇಖ ವಿರುದ್ಧ ಟ್ರೋಲ್ ಮಾಡುವವರಿಗೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದಿಂದ ಪ್ರತಿಭಟನೆ ಜರುಗಿದೆ. ಪೇಜಾವರ ಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸಾಕಷ್ಟು ಟೀಕೆಗೆ ಒಳಗಾಗಿದ್ದ ಹಂಸಲೇಖ ಅವರ ಪರ ಬೆಂಗಳೂರು ವಿವಿ ವಿದ್ಯಾರ್ಥಿಗಳು ಮುಂದಾಗಿದ್ದಾರೆ.
ಹಂಸಲೇಖ ಅವರ ವಿರುದ್ಧ ದಾಖಲಾಗಿರುವಂತಹ FIR ರದ್ದುಗೊಳಿಸಿ, ಟ್ರೋಲಿಗರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಇನ್ನೂ ಇದು ಹಂಸಲೇಖ ಅವರ ವಿರುದ್ಧ ವ್ಯವಸ್ಥಿತವಾದಂತಹ ಷಡ್ಯಂತ್ರ ನಡೆದಿದೆ. ಹೀಗಾಗಿ ಅವರ ವಿರುದ್ಧ ದಾಖಲಾಗಿರುವ ಎಲ್ಲಾ ದೂರುಗಳನ್ನು ರದ್ದುಗೊಳಿಸಿ, ಅವರ ತೇಜೋವಧೆ ಮಾಡದಂತೆ ಬೆಂಗಳೂರು ವಿವಿ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ ಎನ್ನಲಾಗಿದೆ.
Laxmi News 24×7