Breaking News

ಸಂಸತ್ ನಲ್ಲಿ ಘೋಷಣೆ ಮಾಡಿದ ಮೇಲೆ ಪ್ರತಿಭಟನೆ ಹಿಂದಕ್ಕೆ : ರಾಕೇಶ್ ಟಿಕಾಯತ

Spread the love

ನವದೆಹಲಿ: ಭಾರಿ ವಿವಾದ ಸೃಷ್ಟಿಸಿದ್ದ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದು, ರೈತರು ಪ್ರತಿಭಟನೆಯನ್ನು ವಾಪಸ್‌ ಪಡೆಯುವಂತೆ ಕೋರಿಕೊಂಡಿದ್ದಾರೆ. ಈ ಬಗ್ಗೆ ಹಲವೆಡೆಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾದರೂ ಪ್ರತಿಭಟನೆಯ ನೇತೃತ್ವ ವಹಿಸಿರುವ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಮಾತ್ರ ಸದ್ಯ ಪ್ರಧಾನಿಯ ಮನವಿಗೆ ಸ್ಪಂದಿಸಲ್ಲ ಎಂದಿದ್ದಾರೆ.

 

ಕೃಷಿ ಕಾಯ್ದೆ ವಾಪಸ್‌ ಪಡೆಯುವುದಾಗಿ ಇದೀಗ ಮಾಡಿರುವುದು ಘೋಷಣೆಯಷ್ಟೇ. ಆದ್ದರಿಂದ ಪ್ರತಿಭಟನೆ ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ. ಇದು ಮೊದಲು ಸಂಸತ್ತಿನಲ್ಲಿ ರದ್ದು ಪಡಿಸಬೇಕಿದೆ. ಅಷ್ಟೇ ಅಲ್ಲದೇ, ಸರ್ಕಾರವು ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕಿದೆ. ಆಗ ಮಾತ್ರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಗುವುದು ಎಂದಿದ್ದಾರೆ.

ಈ ಕುರಿತು ಅವರು ಟ್ವೀಟ್‌ ಮಾಡಿದ್ದು, ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ.ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು ರದ್ದುಪಡಿಸುವ ದಿನಕ್ಕಾಗಿ ನಾವು ಕಾಯುತ್ತೇವೆ. ಎಂಎಸ್‌ಪಿ ಜತೆಗೆ ರೈತರ ಇತರೆ ಸಮಸ್ಯೆಗಳ ಬಗ್ಗೆಯೂ ಸರ್ಕಾರ ಮಾತನಾಡಬೇಕು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ