Breaking News

₹1.92 ಕೋಟಿ ಮೌಲ್ಯದ ಹಳೆಯ ನೋಟುಗಳು ವಶಕ್ಕೆ, ಮೂವರ ಬಂಧನ

Spread the love

ಮಂಗಳೂರು: ಅಮಾನ್ಯಗೊಂಡ ನೋಟುಗಳನ್ನು ಸಾಗಿಸುತ್ತಿದ್ದ ಮೂವರನ್ನು ಬಂಧಿಸಿರುವ ನಗರ ಠಾಣೆ ಪೊಲೀಸರು, ಬಂಧಿತರಿಂದ ₹ 1.92 ಕೋಟಿ ಮೊತ್ತದ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ಕಣ್ಣೂರಿನ ಜುಬೇರ್ ಹಮ್ಮಬ್ಬ (52), ಪಡೀಲ್‌ನ ದೀಪಕ್ ಕುಮಾರ್ (32) ಮತ್ತು ಬಜ್ಪೆ ನಿವಾಸಿ ಅಬ್ದುಲ್ ನಾಸೀರ್ (40) ಬಂಧಿತರು.

ಜುಬೇರ್ ಮತ್ತು ನಾಸೀರ್ ಚಾಲಕರಾಗಿದ್ದು, ದೀಪಕ್ ವಿದ್ಯುತ್ ಗುತ್ತಿಗೆದಾರ.

ಈ ಮೂವರು ಅಡ್ಯಾರ್‌ನಿಂದ ಲಾಲ್‌ಬಾಗ್‌ಗೆ ಅಮಾನ್ಯಗೊಂಡ ನೋಟುಗಳನ್ನು ಸಾಗಿಸುತ್ತಿದ್ದು, ಪೊಲೀಸರು ಕಾರು ನಿಲ್ಲಿಸಿ ತಪಾಸಣೆ ಮಾಡಿದಾಗ ಎರಡು ಬ್ಯಾಗ್‌ಗಳಲ್ಲಿ ಈ ನೋಟುಗಳು ಪತ್ತೆಯಾಗಿವೆ. ₹ 1,000 ಮುಖಬೆಲೆಯ ನೋಟುಗಳ 10 ಬಂಡಲ್‌ಗಳು ಮತ್ತು ₹ 500 ಮುಖಬೆಲೆಯ 57 ಬಂಡಲ್‌ಗಳಿದ್ದು, ಪೊಲೀಸರು ವಾಹನಸಹಿತ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಶಿವಮೊಗ್ಗ ಮತ್ತು ಚಿತ್ರದುರ್ಗದಿಂದ ಅಮಾನ್ಯಗೊಂಡ ನೋಟುಗಳನ್ನು ತಂದಿದ್ದರು ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿತ್ರದುರ್ಗ ಮತ್ತು ಶಿವಮೊಗ್ಗದಲ್ಲಿ ಈ ನೋಟುಗಳನ್ನು ಯಾರಿಂದ ತೆಗೆದುಕೊಂಡಿದ್ದಾರೆ ಮತ್ತು ಅದರಲ್ಲಿ ಭಾಗಿಯಾಗಿರುವ ಇತರರನ್ನು ಕಂಡುಹಿಡಿಯುವ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ.

ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಗೋಕಾಕ ನಗರದ ಉತ್ತರ ಮತ್ತು ಪಶ್ಚಿಮ ದಿಕ್ಕುಗಳಲ್ಲಿ ಹರಿಯುತ್ತಿರುವ ಘಟಪ್ರಭಾ ಮತ್ತು ಮಾರ್ಕಂಡೇಯ ನದಿಗಳ ಸಂಗಮದ ಪವಿತ್ರ ಸ್ಥಳವನ್ನು ಅಭಿವೃದ್ಧಿ ಪಡಿಸಲು ಸರಕಾರವನ್ನು ಆಗ್ರಹಿಸಲಾಯಿತು.

Spread the loveಗೋಕಾಕ 31: ಗೋಕಾಕ ನಗರದ ಉತ್ತರ ಮತ್ತು ಪಶ್ಚಿಮ ದಿಕ್ಕುಗಳಲ್ಲಿ ಹರಿಯುತ್ತಿರುವ ಘಟಪ್ರಭಾ ಮತ್ತು ಮಾರ್ಕಂಡೇಯ ನದಿಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ