Breaking News

ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆ,ನಾನು ನೀಡಿದ್ದ ಭರವಸೆಯನ್ನು ಶೀಘ್ರವೇ ಈಡೇರಿಸುವೆ. :B.S.Y.

Spread the love

ಚಿಕ್ಕೋಡಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉತ್ತಮ ಕೆಲಸ ಮಾಡುತ್ತಿವೆ. ವಿಪಕ್ಷಗಳು ಟೀಕೆ ಮಾಡುವುದನ್ನು ಬಿಟ್ಟು ರಚನಾತ್ಮಕ ಸಲಹೆಗಳನ್ನು ನೀಡಲಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಳಗಾವಿಯ ಚಿಕ್ಕೋಡಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ 5 ಲಕ್ಷ ಪರಿಹಾರ ನೀಡಿದ್ದೇವೆ. ಭಾಗಶ: ಹಾನಿಯಾದವರಿಗೆ 50 ಸಾವಿರ ಕೊಟ್ಟಿದ್ದೇವೆ. ಈವರೆಗೂ ದೇಶದ ಯಾವ ಸರ್ಕಾರ ಕೂಡ ಇಂತಹ ಕಾರ್ಯ ಕೈಗೊಂಡಿಲ್ಲ. ನಮ್ಮದು ಜನಪರ ಸರ್ಕಾರವಾಗಿದೆ ಎಂದು ಹೇಳಿದರು.

ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಮೊದಲ ಸುತ್ತಲ್ಲೇ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ. ಕಾಂಗ್ರೆಸ್ ಇನ್ನೂ ತಮ್ಮ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಜೆಡಿಎಸ್ ಅಭ್ಯರ್ಥಿಗಳು ಇಲ್ಲದ ಕಡೆ ಜೆಡಿಎಸ್ ನಾಯಕರು ನಮಗೆ ಬೆಂಬಲ ನೀಡಲಿ ಎಂದರು.

ಇನ್ನು ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆ ಘೋಷಣೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಯಡಿಯೂರಪ್ಪ, ನಾನು ನೀಡಿದ್ದ ಭರವಸೆಯನ್ನು ಈಡೇರಿಸುವೆ. ಶೀಘ್ರವೇ ಸಿಎಂ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.


Spread the love

About Laxminews 24x7

Check Also

ಗ್ರಾಮ ಪಂಚಾಯತ್​ ವ್ಯಾಪ್ತಿಯಲ್ಲಿ ಬಡಾವಣೆಗಳನ್ನು ರೂಪಿಸಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸುತ್ತೋಲೆ

Spread the loveಬೆಂಗಳೂರು : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶಗಳಲ್ಲಿನ ಭೂಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಳ ವಿನ್ಯಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ