Breaking News

ಪರಿಷತ್ ಚುನಾವಣೆ: ಮತದಾರರ ಅಂತಿಮ‌ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್

Spread the love

ಬೆಳಗಾವಿ  : 04-ಬೆಳಗಾವಿ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 511 ಮತಗಟ್ಟೆಗಳ ಅಂತಿಮ ಮತದಾರರ ಪಟ್ಟಿಗಳನ್ನು ಭಾನುವಾರ(ನ.21) ಪ್ರಸಿದ್ದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ತಿಳಿಸಿದ್ದಾರೆ.

ಮತದಾರರ ಕರಡು ಪಟ್ಟಿಯನ್ನು 11-11-2021 ರಂದು ಪ್ರಕಟಿಸಲಾಗಿತ್ತು. ಸಾರ್ವಜನಿಕರ ಆಕ್ಷೇಪಣೆಗಳನ್ನು ಆಧರಿಸಿ ಸರಿಪಡಿಸಲಾಗಿರುವ ಮತದಾರರ ಅಂತಿಮ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ.

ಮತದಾರರ ಪಟ್ಟಿಗಳು ಸಂಬಂಧಿಸಿದ ಗ್ರಾಮ ಪಂಚಾಯತಿಗಳಲ್ಲಿ ಹಾಗೂ ನಗರ ಸ್ಥಳೀಯ
ಸಂಸ್ಥೆಗಳು, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ
ಪಂಚಾಯತ, ಜಿಲ್ಲೆಯ ಎಲ್ಲ ಉಪವಿಭಾಗಾಧಿಕಾರಿಗಳ ಕಾರ್ಯಾಲಯಗಳಲ್ಲಿ, ಕಾರ್ಯ ನಿರ್ವಾಹಕ
ಅಧಿಕಾರಿಗಳು ತಾಲೂಕು ಪಂಚಾಯತ ಕಾರ್ಯಾಲಯಗಳಲ್ಲಿ ಜಿಲ್ಲೆಯ ಎಲ್ಲ ತಹಶೀಲದಾರರ
ಕಾರ್ಯಾಲಯಗಳಲ್ಲಿ ಲಭ್ಯವಿರುತ್ತವೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ