ಬೆಂಗಳೂರು: ನಟ ಪುನೀತ್ ರಾಜ್‌ಕುಮಾರ್ ಎಲ್ಲರನ್ನೂ ಅಗಲಿ ತಿಂಗಳಾಗುತ್ತ ಬಂದರೂ ಅವರ ಸಾವಿನ ಬಗ್ಗೆ ಇದುವರೆಗೂ ಹಲವು ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವೇ ಆಗುತ್ತಿಲ್ಲ. ಅಂಥ ಬೆಲೆ ಕಟ್ಟಲಾಗದ ಅಭಿಮಾನ ಅವರ ಮೇಲಿದೆ.
ಇದಾಗಲೇ ಸಿನಿಕ್ಷೇತ್ರದವರು, ಕುಟುಂಬಸ್ಥರು ಸೇರಿದಂತೆ ಸಾಮಾನ್ಯ ಜನರು ಕೂಡ ಅಪ್ಪುವಿನ ಜತೆಗಿನ ತಮ್ಮ ಒಡನಾಟವನ್ನು ನೆನಪಿಸಿಕೊಳ್ಳುತ್ತಿರುವ ಬೆನ್ನಲ್ಲೇ ಪುನೀತ್ ಅವರ ಸಮಾಧಿಯ ಮುಂದೆ ಬಂದು ರೋಧಿಸುತ್ತಿರುವವರೂ ಹಲವರು.
ಇದೀಗ ಅಭಿಮಾನಿಯೊಬ್ಬ ಸುರಿಯುವ ಮಳೆಯನ್ನೂ ಲೆಕ್ಕಿಸದೇ ಪುನೀತ್ ಅವರ ಚಿತ್ರವಿರುವ ಬ್ಯಾನರ್ ಮುಂದೆ ಕೈಮುಗಿದು ಕುಳಿತುಕೊಂಡಿರುವ ದೃಶ್ಯವೊಂದು ವೈರಲ್ ಆಗಿದೆ. ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಈ ಮಳೆಯ ನಡುವೆಯೇ ತಮ್ಮ ಪ್ರೀತಿಯ ಅಪ್ಪುವಿಗೆ ಹೀಗೊಂದು ರೀತಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಇದರ ವಿಡಿಯೋ ಅನ್ನು ‘ಟ್ರೋಲ್ ಕನ್ನಡ ಮೂವಿಸ್’ ಶೇರ್ ಮಾಡಿಕೊಂಡಿದ್ದು, ಇದೀಗ ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Laxmi News 24×7