Breaking News

ಮೋದಿ ಸರ್ಕಾರಕ್ಕೆ ಜ.26ರವರೆಗೆ ಗಡುವು: MSPಗಾಗಿ ಒತ್ತಾಯ

Spread the love

ನವದೆಹಲಿ ನವೆಂಬರ್ 26: ದೆಹಲಿ ಗಡಿ ಭಾಗದಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಬೇಡಿಕೆ ಈಡೇರಿಕೆಗಾಗಿ ಕೇಂದ್ರ ಸರ್ಕಾರಕ್ಕೆ ರೈತರು ಗಡುವು ಕೊಟ್ಟಿದ್ದಾರೆ. ಸಂಸತ್ತಿನ ಅಧಿವೇಶನ ನಡೆಯುವವರೆಗೂ ಸರ್ಕಾರಕ್ಕೆ ಯೋಚಿಸಲು ಮತ್ತು ಅರ್ಥಮಾಡಿಕೊಳ್ಳಲು ಸಮಯವಿದೆ. ಕೇಂದ್ರ ಸರ್ಕಾರಕ್ಕೆ ಜನವರಿ 26 ರವರೆಗೆ ಬೇಡಿಕೆ ಈಡೇರಿಕೆಗೆ ಸಮಯ ನೀಡಿದ್ದೇವೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಸತ್ತಿನಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಕುರಿತು ಹೇಳಿಕೆ ನೀಡಿದ್ದಾರೆ. ಸಂಸತ್ತಿನ ಅಧಿವೇಶನ ನಡೆಯುವವರೆಗೂ ಸರ್ಕಾರಕ್ಕೆ ಯೋಚಿಸಲು ಮತ್ತು ಅರ್ಥಮಾಡಿಕೊಳ್ಳಲು ಸಮಯವಿದೆ. ಸಂಸತ್ತಿಗೆ ಚಾಲನೆ ನೀಡಿದ ನಂತರ ಚಳವಳಿಯನ್ನು ಹೇಗೆ ಮುಂದುವರಿಸಬೇಕು ಎಂಬುದರ ಕುರಿತು ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ನಮ್ಮ ಆಂದೋಲನದ ರೂಪುರೇಷೆ ಏನೆಂಬುದನ್ನು ನವೆಂಬರ್ 27 ರಂದು ನಡೆಯಲಿರುವ ಯುನೈಟೆಡ್ ಕಿಸಾನ್ ಮೋರ್ಚಾ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಗಾಜಿಪುರ ಗಡಿಯಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದರು.

 


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ