Breaking News

ಪ್ರಧಾನಮಂತ್ರಿ ಗರಿಬ್ ಕಲ್ಯಾಣ ಯೋಜನೆ: 5 ಕೆಜಿ ಉಚಿತ ರೇಷನ್ ಇನ್ನೂ 4 ತಿಂಗಳು ಮುಂದುವರಿಕೆ

Spread the love

ನವದೆಹಲಿ: ಕೊರೋನಾ ಸಂಕಷ್ಟದ ಕಾರಣದಿಂದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ 5 ಕೆಜಿ ಉಚಿತ ಪಡಿತರ ವಿತರಿಸುವ ಯೋಜನೆಯನ್ನು ಮುಂದಿನ ವರ್ಷದ ಮಾರ್ಚ್ ವರೆಗೆ ವಿಸ್ತರಿಸಲಾಗಿದೆ. ಗರಿಬ್ ಕಲ್ಯಾಣ ಯೋಜನೆಯಡಿ 80 ಕೋಟಿ ಪಡಿತರ ಫಲಾನುಭವಿಗಳಿಗೆ ಉಚಿತ ಪಡಿತರ ನೀಡಲಾಗುತ್ತದೆ.

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.

ಇದಕ್ಕಾಗಿ 53,344 ಕೋಟಿ ರೂ. ವೆಚ್ಚ ಮಾಡಲಾಗುವುದು. ಇದರೊಂದಿಗೆ ಉಚಿತ ಪಡಿತರ ವಿತರಣೆ ಮಾಡಲು ಸರ್ಕಾರ 2.6 ಲಕ್ಷ ಕೋಟಿ ರೂ. ವೆಚ್ಚ ಮಾಡಿದಂತಾಗುತ್ತದೆ. ಪಡಿತರ ಚೀಟಿದಾರರಿಗೆ ನೀಡುವ ಪಡಿತರದ ಜೊತೆಗೆ ಹೆಚ್ಚುವರಿಯಾಗಿ 5 ಕೆಜಿ ಆಹಾರ ಧಾನ್ಯ ನೀಡಲಾಗುವುದು.


Spread the love

About Laxminews 24x7

Check Also

ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 4000 ಜನ ಉಚ್ಚಾರಿಸಿಕೊಂಡರು.

Spread the love ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ