Breaking News

10 ನಿಮಿಷಗಳ ಅಂತರದಲ್ಲಿ ಸಚಿವ ರಮೇಶ ಜಾರಕಿಹೊಳಿ, ಲಖನ್ ಜಾರಕಿಹೊಳಿ ಒಂದೇ ವೇದಿಕೆ ಮೇಲೆ ಪ್ರಾಚರ!!

Spread the love

 

ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಇಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯಲ್ಲಿ ಮತಯಾಚನೆ ಮಾಡಿದರು. ಇನ್ನು ನನಗೇ ಪ್ರಥಮ ಪ್ರಾಶಸ್ಥ್ಯದ ಮತವನ್ನು ಕೊಡಿ ಎಂದು ಮತಯಾಚನೆ ಮಾಡಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯಲ್ಲಿ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಮತಯಾಚನೆ ಮಾಡಿದರು. ಇನ್ನು ಈ ಮೊದಲು 10 ನಿಮಿಷಗಳ ಮೊದಲು ಅದೇ ವೇದಿಕೆ ಮೇಲೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಪರಿಷತ್ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಪರ ಮತಯಾಚನೆ ಮಾಡಿ ಮೊದಲ ಪ್ರಾಶಸ್ಥ್ಯದ ಮತವನ್ನು ನೀಡುವಂತೆ ಮನವಿ ಮಾಡಿದ್ದರು.

ಇದಾದ 10 ನಿಮಿಷಗಳ ನಂತರ ಅದೇ ವೇದಿಕೆ ಮೇಲೆ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಮತಯಾಚನೆ ಮಾಡಿದರು. ಈ ವೇಳೆ ನನಗೆ ಪ್ರಥಮ ಪ್ರಾಶಸ್ಥ್ಯದ ಮತವನ್ನು ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.
ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದು ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ಸವಾಲೆನ್ನುವಂತೆ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಇನ್ನು ಪರಿಷತ್ ಕಣದಲ್ಲಿ ಗೆಲುವು ಯಾರದ್ದು ಎಂದು ಕಾದು ನೋಡಬೇಕಿದೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ