Breaking News

ನಡು ರಸ್ತೆಯಲ್ಲಿಯೇ ಭಾರಿ ವಾಹನಗಳನ್ನು ನಿಲ್ಲಿಸಿ ವಿವಿಧ ವಸ್ತುಗಳ ಲೋಡಿಂಗ್, ಅನ್‍ಲೋಡಿಂಗ್ ಮಾಡುತ್ತಿರುವುದಕ್ಕೆ ಸಾರ್ವಜನಿಕರ ತೀವ್ರ ಆಕ್ರೋಶ

Spread the love

ಬೆಳಗಾವಿಯ ಯಡಿಯೂರಪ್ಪ ಮಾರ್ಗದಲ್ಲಿ ನಡು ರಸ್ತೆಯಲ್ಲಿಯೇ ಭಾರಿ ವಾಹನಗಳನ್ನು ನಿಲ್ಲಿಸಿ ವಿವಿಧ ವಸ್ತುಗಳ ಲೋಡಿಂಗ್, ಅನ್‍ಲೋಡಿಂಗ್ ಮಾಡುತ್ತಿರುವುದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೌದು ಯಡಿಯೂರಪ್ಪ ಮಾರ್ಗದ ರಸ್ತೆ ರಾಷ್ಟ್ರೀಯ ಹೆದ್ದಾರಿ-4ರಿಂದ ಬೆಳಗಾವಿ ನಗರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ. ದಿನನಿತ್ಯ ಸಾವಿರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತವೆ. ಇಂತಹ ಸಮಯದಲ್ಲಿಯೇ ಬೇಕಾಬಿಟ್ಟಿಯಾಗಿ ದೊಡ್ಡ ಕ್ಯಾಂಟರ್‍ಗಳನ್ನು ನಡು ರಸ್ತೆಯಲ್ಲಿಯೇ ನಿಲ್ಲಿಸಿ, ಲೋಡ್, ಅನ್‍ಲೋಡ್ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ.

ಇಷ್ಟೇಲ್ಲಾ ಆಗುತ್ತಿದ್ದರೂ ಕೂಡ ಪೊಲೀಸರು ಯಾವುದೇ ರೀತಿ ಕ್ರಮ ಕೈಗೊಳ್ಳದೇ ಇರುವುದು ಸಧ್ಯ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸುದ್ದಿಯಿಂದಾದರೂ ಎಚ್ಚೆತ್ತುಕೊಂಡು ಬೆಳಗಾವಿ ನಗರ ಪೊಲೀಸರು ಕ್ರಮ ಕೈಗೊಳ್ಳುತ್ತಾರಾ ಎಂದು ಕಾದು ನೋಡಬೇಕಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ