Breaking News

ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿದ್ದಕ್ಕೆ ಲಕ್ಷಿ ಹೆಬ್ಬಾಳ್ಕರ್‌ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಈಶ್ವರಪ್ಪ

Spread the love

ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತಮಗೆ ಬೇಕಾದವರಿಗೆ, ಪರಿಚಿತರಿಗೆ, ಹಾಗೂ ಹಣವಂತರಿಗೆ ಮಾತ್ರ ಟಿಕೆಟ್ ನೀಡಿದ್ದಾರೆ. ಇದನ್ನು ಜನತೆ ತಿರಸ್ಕಾರ ಮಾಡುತ್ತಾರೆಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.


ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆಎಸ್ ಈಶ್ವರಪ್ಪನವರು, ಬಿಜೆಪಿ ಡಿಸೆಂಬರ್೧೨ ರಂದು ಬೆಂಗಳೂರಿನ ಅರಮನೆ ಆವರಣದಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಗಳಿಂದ ತಲಾ ೧೦ ಹಿಂದುಳಿದ ವರ್ಗಗಳ ನಾಯಕರ ಜಾಗೃತಿ ಸಮಾವೇಶ ನಡೆಯಲಿದೆ. ಅದರ ಪ್ರಯುಕ್ತ ಬೆಳಗಾವಿ ಹಾಗೂ ಚಿಕ್ಕೋಡಿಯಲ್ಲಿ ವಿಭಾಮಟ್ಟದ ಸಭೆ ನಡೆಸುತ್ತಿದ್ದೇವೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸುಮಾರು ೩೫೦೦ ಜನ ದಲಿತ ನಾಯಕರ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಇನ್ನು ಶಾಸಕ ರಮೇಶ ಜಾರಕಿಹೊಳಿ ಕಾಂಗ್ರೆಸ್‌ಗೆ ಮಾಡಿದ ಅನ್ಯಾಯ ಕುರಿತಂತೆ ಲಕ್ಷಿö್ಮ ಹೆಬ್ಬಾಳ್ಕರ್ ಹೇಳಿಕೆ ಬಗ್ಗೆ ಮಾತನಾಡಿದ ಅವರು ರಮೇಶ್ ಜಾರಕಿಹೊಳಿ ಅನ್ಯಾಯ ಮಾಡಿದ್ದು ಈಗ ತಿಳೀತಾ ಇಷ್ಟು ದಿನ ಏನು ಮಾಡುತ್ತಿದ್ದರು ಎಂದು ಪ್ರಶ್ನೆ ಮಾಡಿದರು. ಕಾಂಗ್ರೆಸ್‌ನಲ್ಲಿ ತಮಗೆ ಬೇಕಾದವರಿಗೆ, ಹಣವಂತರಿಗೆ, ಹಾಗೂ ತಮ್ಮ ಆಪ್ತರಿಗೆ ಪರಿಷತ್ ಟಿಕೆಟ್ ನೀಡಿದ್ದಾರೆ. ಇದನ್ನು ಜನ ತಿರಸ್ಕರಿಸುತ್ತಾರೆ. ಇನ್ನು ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿದ್ದಕ್ಕೆ  ಹೆಬ್ಬಾಳ್ಕರ್‌ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಟಾಂಗ್ ಕೊಟ್ರು.

ಇನ್ನು ರಮೇಶ್ ಜಾರಕಿಹೊಳಿ, ಲಖನ್ ಜಾರಕಿಹೊಳಿ ಪರವಾಗಿ ಮತ ಪ್ರಚಾರ ಮಾಡುತ್ತಿರುವ ಕುರಿತೆಂತೆ ಪ್ರತಿಕ್ರಿಯೆ ನೀಡಿದ ಅವರು, ಮೊದಲ ಪ್ರಾಶಸ್ಥö್ಯದ ಮತವನ್ನು ಬಿಜೆಪಿಗೆ ನೀಡಿ ಎರಡನೇ ಪ್ರಾಶಸ್ಥö್ಯದ ಮತವನ್ನು ತಮ್ಮ ತಮ್ಮನಿಗೆ ನೀಡುವಂತೆ ಮತ ಯಾಚನೆ ಮಾಡಿದ್ದಾರೆ. ಇದರಿಂದ ಬಿಜೆಪಿಗೆ ಯಾಗುದೇ ಗೊಂದಲವಿಲ್ಲ. ಬಿಜೆಪಿಗೆ ನಿರ್ದಿಷ್ಟ ಮತಗಳಿದ್ದು ಈ ಬಾರಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆಂದು ವಿಶ್ವಸ ವ್ಯಕ್ತಪಡಿಸಿದರು.
ಇನ್ನು ಈಗಾಗಲೇ ಪರಿಷತ್ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಎಲ್ಲ ನಾಯಕರು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಗೆಲುವು ನಮ್ಮದೇ ಎಂದು ವಿಶ್ವಾಸದಲ್ಲಿ ತೇಲುತ್ತಿದ್ದಾರೆ;. ಆದರೆ ಮತದಾರ ಯಾರತ್ತ ಒಲವು ತೋರುತ್ತಾನೆಂದು ಕಾದು ನೋಡಬೇಕಿದೆ.


Spread the love

About Laxminews 24x7

Check Also

ಹಠಾತ್​ ಸಾವು ಅಧಿಸೂಚಿತ ಕಾಯಿಲೆ, ಮರಣೋತ್ತರ ಪರೀಕ್ಷೆ ಕಡ್ಡಾಯ: ಸಚಿವ ದಿನೇಶ್​ ಗುಂಡೂರಾವ್

Spread the loveಬೆಂಗಳೂರು: ಕೋವಿಡ್​​ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ ಎಂಬುದು ವರದಿಯಲ್ಲಿ ಗೊತ್ತಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ರವೀಂದ್ರನಾಥ್ ನೇತೃತ್ವದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ