Breaking News

ಅತೀ ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ಮಹತ್ವದ ಬದಲಾವಣೆ ಉಂಟಾಗಲಿದೆ:ಠಾಕ್ರೆ ಸರ್ಕಾರದ ಪತನದ ಭವಿಷ್ಯ ನುಡಿದಿದ್ದಾರೆ.?

Spread the love

ಅತೀ ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ಮಹತ್ವದ ಬದಲಾವಣೆ ಉಂಟಾಗಲಿದೆ ಎಂದು ಹೇಳುವ ಮೂಲಕ ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ನಾರಾಯಣ ರಾಣೆ ಠಾಕ್ರೆ ಸರ್ಕಾರದ ಪತನದ ಭವಿಷ್ಯ ನುಡಿದಿದ್ದಾರೆ.

ರಾಜಸ್ಥಾನದಲ್ಲಿ 2 ದಿನಗಳ ಪ್ರವಾಸದಲ್ಲಿರುವ ನಾರಾಯಣ ಠಾಕ್ರೆ, ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ಬದಲಾವಣೆಯನ್ನು ಕಾಣಲಿದ್ದೀರಿ.

ಮಾರ್ಚ್​ ತಿಂಗಳಲ್ಲಿ ಈ ಬದಲಾವಣೆ ಕಾಣಲಿದೆ. ಸರ್ಕಾರವನ್ನು ರಚಿಸುವುದು ಹಾಗೂ ಸರ್ಕಾರವನ್ನು ಪತನಗೊಳಿಸುವುದು, ಕೆಲವೊಂದು ವಿಚಾರಗಳನ್ನು ರಹಸ್ಯವಾಗಿಯೇ ಇಡಬೇಕು ಎಂದು ಹೇಳಿದ್ದಾರೆ.

ಉದ್ಧವ್ ಠಾಕ್ರೆಗೆ ಅನಾರೋಗ್ಯವಿದೆ. ಹೀಗಾಗಿ ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಕಾಂತ್​ ಪಾಟೀಲ್​ ಈಗಲೇ ಅವರೊಡನೆ ಮಾತನಾಡೋದು ಬೇಡ ಎಂದು ಹೇಳಿದ್ದಾರೆ. ಆದರೆ ಮಹಾರಾಷ್ಟ್ರದಲ್ಲಿ ಮೂರು ಪಕ್ಷಗಳ ಮಹಾ ವಿಕಾಸ್​ ಅಘಾಡಿ ಸರ್ಕಾರ ಇನ್ನು ಜಾಸ್ತಿ ದಿನ ಉಳಿಯೋದಿಲ್ಲ ಎಂದು ಹೇಳಿದ್ರು.

ಎರಡು ವಾರಗಳ ಹಿಂದೆಯಷ್ಟೇ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮುಂಬೈನ ಹೆಚ್​ಎನ್​ ರಿಲಯನ್ಸ್​ ಆಸ್ಪತ್ರೆಯಲ್ಲಿ ಯಶಸ್ವಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಮಹಾ ವಿಕಾಸ್​ ಅಘಾಡಿ ಸರ್ಕಾರದಲ್ಲಿ ಶಿವಸೇನಾ, ಕಾಂಗ್ರೆಸ್​ ಹಾಗೂ ಎನ್​​ಸಿಪಿ ಮೈತ್ರಿ ಮಾಡಿಕೊಂಡಿದೆ.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ