Breaking News

ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ನಾಳೆಯಿಂದ ಕಟ್ಟುನಿಟ್ಟಿನ ಕ್ರಮ

Spread the love

ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ನಾಳೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಹೇಳಿದರು.

ಮಹಾನಗರ ಪಾಲಿಕೆ ಸಭಾಂಗಣದಲ್ಲಿಂದು ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಶಾಫಿಂಗ್ ಮಾಲ್, ಜಿಮ್, ಬಾರ್ ಆಂಡ್ ರೆಸ್ಟೋರೆಂಟ್, ಮಲ್ಟಿಪ್ಲೆಕ್ಸ್, ಸಿನಿಮಾ ಮಂದಿರಗಳ ಮಾಲೀಕರು ಹಾಗೂ
ಧಾರ್ಮಿಕ ಮುಖಂಡರ ಜೊತೆ ಪ್ರತ್ಯೇಕ ಸಭೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಎಲ್ಲ ಸಮುದಾಯದ ಮುಖಂಡರ ಜೊತೆ ಕೋವಿಡ್ ಲಸಿಕೆ ಬಗ್ಗೆ ಚರ್ಚೆ ಮಾಡಲಾಗಿದೆ.
ಹುಬ್ಬಳ್ಳಿಯ ಕೆಲ ಏರಿಯಾಗಳಲ್ಲಿ ಲಸಿಕೆ ತೆಗೆದುಕೊಳ್ಳಲು ಮುಂದಾಗಿಲ್ಲ. ಎಲ್ಲರ ಜೊತೆ ಚರ್ಚೆ ಮಾಡಿ ಲಸಿಕೆ ನೀಡಲು ತೀರ್ಮಾನ ಮಾಡಲಾಗಿದೆ. ಎರಡು ಡೋಸ್ ಗಳನ್ನ ಕಡ್ಡಾಯವಾಗಿಸಲು ತೀರ್ಮಾನಿಸಲಾಗಿದೆ. ಸಿನಿಮಾ ಥಿಯೇಟರ್, ಕಲ್ಯಾಣ ಮಂಟಪ ಸೇರಿದಂತೆ ಕೆಲ ಕಡೆಗಳಲ್ಲಿ ಎರಡೂ ಡೋಸ್ ಲಸಿಕೆ ಪಡೆದರೆ ಮಾತ್ರ ಪ್ರವೇಶಕ್ಕೆ ಸೂಚಿಸಲಾಗಿದೆ. ಎಲ್ಲಾ ಮಾಲೀಕರಿಗೂ ಸೂಚ‌ನೆ ನೀಡಿದ್ದು, ನಾಳೆಯಿಂದ ಅವಳಿ ನಗರದಲ್ಲಿ ಕಟ್ಟು ನಿಟ್ಟಿನ ನಿಯಾಮಾವಳಿ ಜಾರಿಯಾಗಲಿದೆ ಎಂದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ