Breaking News

ಕರ್ನಾಟಕದಲ್ಲಿ ಓಮಿಕ್ರಾನ್ ರೂಪಾಂತರ ಪತ್ತೆಯಾಗಿಲ್ಲ: ಸಿಎಂ ಬೊಮ್ಮಾಯಿ

Spread the love

ಬೆಂಗಳೂರು: ಕರ್ನಾಟಕದಲ್ಲಿ ಓಮಿಕ್ರಾನ್ ರೂಪಾಂತರ ಪತ್ತೆಯಾಗಿಲ್ಲ .ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್‌ ಕೇಸ್‌ ಹೆಚ್ಚಳವಾಗಿದ್ದು, ಈ ಹಿನ್ನಲೆಯಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಯಾ ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ

ಅವರು ಇದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಈ ಬಗ್ಗೆಮಾಹಿತಿ ನೀಡಿದರು.ಇದೇ ವೇಳೆ ಅವರು ಧಾರವಾಡದ ಎಸ್‌ಡಿಎಂ ಮೆಡಿಕಲ್‌ ಕಾಲೇಜಿನಲ್ಲಿ ಉಂಟಾಗಿರುವ ಕೋವಿಡ್ ಸ್ಪೋಟಕ್ಕೆ ಸಂಬಂಧಪಟ್ಟಂತೆ ಮಾಹಿತಿ ನೀಡಿ ಸದ್ಯ ಆಸ್ಪತ್ರೆಯ ಒಪಿಡಿಯನ್ನು ಬಂದ್‌ ಮಾಡಲಾಗಿದ್ದು, ಎಲ್ಲಾ ರೀತಿಯಲ್ಲಿ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಲಾಗಿದೆ .

 

ಇನ್ನೂ ರಾಜ್ಯದ ಏರ್‌ಪೋರ್ಟ್‌ಗಳಲ್ಲಿ ಕಡ್ಡಾಯವಾಗಿ ನೆಗೆಟಿವ್‌ ಇರೋರಿಗೆ ಮಾತ್ರ ವಿಮಾನ ನಿಲ್ದಾಣದಿಂದ ಅವಕಾಶ ನೀಡಲಾಗುತ್ತದೆ, ಇಲ್ಲವಾದಲ್ಲಿ ವೈದ್ಯಕೀಯ ಮಾರ್ಗಸೂಚಿಗಳನ್ನು ಅನುಸರಿಸಲಾಗುತ್ತದೆ ಅಂತ ಹೇಳಿದರು. ಇನ್ನೂ ರಾಜ್ಯದ ಗಡಿ ಭಾಗಗಳಲ್ಲಿ ಈ ಸೂಕ್ತವಾದ ಕ್ರಮವನ್ನು ಕೈಗೊಳ್ಳಾಗಿದ್ದು, ಗಡಿ ಭಾಗಗಳಲ್ಲಿ ಸೂಕ್ತ ರೀತಿಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಾಗುವುದು, ಇದಲ್ಲದೇ ಬೂಸ್ಟರ್‌ ಡೋಸ್‌ ನೀಡುವುದಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರದಿಂದ ಚರ್ಚೆ ನಡೆಸಲಾಗುತ್ತಿದೆ ಅನುಮತಿ ಸಿಕ್ಕ ಬಳಿಕ ಚಾಲನೆ ನೀಡಲಾಗುತ್ತದೆ ಅಂತ ತಿಳಿಸಿದರು. ಇದೇ ವೇಳೆ ಅವರು ಮೂರು ದೇಶಗಳಿಗೆ ವಿಮಾನ ಪ್ರಯಾಣ ಬ್ಯಾನ್‌ ಮಾಡುವುದಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿಕೊಳ್ಳಲಾಗಿದೆ ಹೇಳಿದರು.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ